ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮಗ ವಿನೀಶ್ ಬಗ್ಗೆ ಅಸಭ್ಯ, ಅಶ್ಲೀಲ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಆಯೋಗಕ್ಕೆ ಬಂದ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಂಡು ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನೆಲಮಂಗಲದ ಭಾಸ್ಕರ್ ಪ್ರಸಾದ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಇದರಲ್ಲಿ ಅವರು ‘ವಿಜಯಲಕ್ಷ್ಮೀ ದರ್ಶನ್ ಹಾಗೂ ಇವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸಿ ನ್ಯಾಯ ಹಾಗೂ ರಕ್ಷಣೆ ಒದಗಿಸಿ’ ಎಂದು ಮನವಿ ಮಾಡಿದ್ದಾರೆ.
ಇದನ್ನು ಪೊಲೀಸರಿಗೆ ರವಾನಿಸಿರುವ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಅರ್ಜಿದಾರರ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ 15 ದಿನಗಳ ಒಳಗಾಗಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.




