ಬಳ್ಳಾರಿ: ಜಿಲ್ಲೆಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿ ಪುರಸಭೆ, ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಮುಂಬರುವ ಸಮಸ್ಯಾತ್ಮಕ ಹಳ್ಳಿಗಳ ಗುರುತಿಸಿ ಕಾರ್ಯೋನ್ಮುಖರಾಗಬೇಕು ಎಂದರು.
ಯಾವುದೇ ಜಲಮೂಲಗಳ ನೀರನ್ನು ಕುಡಿಯುವ ನೀರು ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ಬಳಸಬಾರದು. ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾ ಹಾಗೂ ತಾಲೂಕು ಆಡಳಿತಗಳು ಸಿದ್ದವಾಗಿರಬೇಕು ಎಂದರು.
ಆದಷ್ಟು ಹೊಸ ಕೊಳವೆ ಬಾವಿ ತೋಡಿಸುವುದಕ್ಕಿಂತ ಇರುವ ಕೊಳವೆ ಬಾವಿಗಳನ್ನು ದುರಸ್ತಿಪಡಿಸಿ ಮೋಟಾರ್, ಪಂಪ್ ಅಳವಡಿಸಲು ಕ್ರಮವಹಿಸಬೇಕು. ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಅವಶ್ಯವಿದ್ದರೆ ಖಾಸಗಿ ಬೋರ್ವೇಲ್ಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಪ್ರಸ್ತುತ 15 ದಿನಗಳವರೆಗೆ ಎಲ್ಎಲ್ಸಿ ಕಾಲುವೆಯಲ್ಲಿ ನೀರು ಹರಿಯಲಿದ್ದು, ಈ ಕೂಡಲೇ ಕೆರೆ, ಓಹೆಚ್ಟಿಗಳನ್ನು ತುಂಬಿಸಿಕೊಳ್ಳಬೇಕು. ನೀರಿನ ಸಂಗ್ರಹಣೆಗೆ ಕ್ರಮವಹಿಸಬೇಕು. ವಿವಿಧ ಭಾಗಗಳಲ್ಲಿ ನೀರಿನ ಕೊರತೆ ಕಂಡುಬಂದಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.




