ಕಾರವಾರ: ಅಕೌಂಟ್ ಜನರಲ್ ಅಧಿಕಾರಿಗಳು ಮುಂದಿನ ಮಾಹೆಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಕಾರವಾರದಲ್ಲಿಯೇ ನಡೆಸಲಿದ್ದು, ಈ ಅದಾಲತ್ ನಲ್ಲಿ ಪಿಂಚಣಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ತಿಳಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಅರಿವು ಸಪ್ತಾಹ ಮತ್ತು ರಾಷ್ಟ್ರವ್ಯಾಪಿ ಡಿಜಿಟಲ್ ಲೈಪ್ ಸರ್ಟಿಫಿಕೇಟ್ ಅಭಿಯಾನ 4.0 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪಿಂಚಣಿದಾರರ ಸಮಸ್ಯೆಗಳನ್ನು ಬಗೆಹರಿಸಲು ನವೆಂಬರ್ ಅಥವಾ ಡಿಸೆಂಬರ್ ಮಾಹೆಯಲ್ಲಿ ಕಾರವಾರದಲ್ಲಿ ಪಿಂಚಣಿ ಅದಾಲತ್ ನಡೆಸಲಾಗುತ್ತದೆ. ಪಿಂಚಣಿದಾರರು ತಮ್ಮ ಸಮಸ್ಯೆಗಳ ಬಗ್ಗೆ ಅದಲಾತ್ ನಲ್ಲಿ ಮಾತ್ರವಲ್ಲದೇ ಕಚೇರಿಗೆ ಬಂದು ಮಾಹಿತಿ ನೀಡಿದರೆ ಅಕೌಂಟ್ ಜನರಲ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿ ಪ್ರಯತ್ನ ಮಾಡಲಾಗುವುದು ಎಂದರು.
ಅಕೌಂಟ್ ಜನರಲ್ ಕಚೇರಿಯ ಹಿರಿಯ ಉಪ ಅಕೌಂಟ್ ಜನರಲ್ ವಿಘ್ನೇಶರನ್ ಜೆ. ಮಾತನಾಡಿ, ಪಿಂಚಣಿದಾರರು ತಮ್ಮ ಪಿಂಚಣಿ ಸೌಲಭ್ಯ ಪಡೆಯಲು ಸಲ್ಲಿಸುವ ದಾಖಲಾತಿಗಳು, ಅಗತ್ಯ ಮಾಹಿತಿಯೊಂದಿಗೆ ಭರ್ತಿ ಮಾಡಲಾಗಿರುವ ಬಗ್ಗೆ ಹಾಗೂ ಸೇವಾ ಪುಸ್ತಕದಲ್ಲಿನ ಮಾಹಿತಿಗಳು ಸರಿಯಾಗಿ ಬರೆಯಲಾಗಿದೆ ಎಂಬುದನ್ನು ಖಾತರಿಪಡಿಕೊಳ್ಳಬೇಕು. ಸಂಬಂಧಿಸಿದ ಕಚೇರಿಯ ಮುಖ್ಯಸ್ಥರು ಸಿಬ್ಬಂದಿ ಸೇವಾ ಪುಸ್ತಕದಲ್ಲಿ ಸರಿಯಾದ ಮಾಹಿತಿ ಒದಗಿಸಿರುವ ಬಗ್ಗೆ ಆಗಾಗ ಪರಿಶೀಲನೆ ಮಾಡಬೇಕು. ಇದರಿಂದ ಪಿಂಚಣಿ ಸೌಲಭ್ಯ ಪಡೆಯಲು ಆಗುವ ಸಮಸ್ಯೆಗಳನ್ನು ಕಡಿಮೆ ಮಾಡಲು ಸಾಧ್ಯ ಎಂದರು.
ಪಿಂಚಣಿದಾರರು ತಮ್ಮ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲು ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಜಾರಿಗೆ ತರಲಾಗಿದ್ದು, ಭಾರತ ಸರ್ಕಾರ ಅಧಿಕೃತ ಆ್ಯಪ್ ಮೂಲಕ ಪಿಂಚಣಿದಾರರು ಜೀವನ ಪ್ರಮಾಣಪತ್ರವನ್ನು ಬ್ಯಾಂಕ್‌ಗಳಿಗೆ ಸಲ್ಲಿಸುವ ಮೂಲಕ ತಮ್ಮ ಪಿಂಚಣಿ ಸೌಲಭ್ಯಗಳನ್ನು ನಿರಂತರವಾಗಿ ಪಡೆಯಬಹುದಾಗಿದೆ ಎಂದರು.
ಸಹಾಯಕ ಅಕೌಂಟ್ ಅಧಿಕಾರಿ ಸುನೀಲ ಕುಮಾರ್ ಮಾತನಾಡಿ, ಪಿಂಚಣಿದಾರರಿಗೆ ಜೀವನ ಪ್ರಮಾಣಪತ್ರವನ್ನು ಸುಲಭವಾಗಿ ಪಡೆಯಲು ರಾಷ್ಟ್ರವ್ಯಾಪಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ ನ.1 ರಿಂದ 30ರವರೆಗೆ ನಡೆಯಲಿದ್ದು, ಪಿಂಚಣಿದಾರರು ಮನೆಯಲ್ಲಿಯೇ ತಮ್ಮ ಮೊಬೈಲ್ ಮೂಲಕ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪಡೆಯಬಹುದಾಗಿದೆ. ಜೀವನ ಪ್ರಮಾಣ ಆ್ಯಪ್ ಡೌನ್ಲೋಡ್ ಮಾಡಿಕೊಂಡು ತಮ್ಮ ಆಧಾರ್ ಸಂಖ್ಯೆ, ಪಿಪಿಓ ಸಂಖ್ಯೆ ದಾಖಲಿಸಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೆಸ್ತಾ, ಅಕೌಂಟ್ ಜನರಲ್ ಕಚೇರಿಯ ಅಧಿಕಾರಿ ಸಚಿನ್ ಮಲ್ನಾಡ್, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿ.ಎಂ.ಹೆಗಡೆ, ಜಿಲ್ಲಾಮಟ್ಟದ ಅಧಿಕಾರಿಗಳು, ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.




