ಬೆಂಗಳೂರು: ಕರ್ನಾಟಕ ಸರ್ಕಾರ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತರದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಸುಗ್ರೀವಾಜ್ಞೆಯನ್ನು ಜಾರಿಗೊಳ್ಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಅನುಷ್ಠಾನದಲ್ಲಿರುವ ಸುಗ್ರೀವಾಜ್ಞೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೆಚ್ಚು ಅಧಿಕಾರಗಳನ್ನು ನೀಡಿದ್ದು, ಸಾಲಗಾರರಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ಮುನ್ನೆಚ್ಚರಿಗೆ ವಹಿಸಬೇಕು. ಮತ್ತು ನಿಯಮಾನುಸಾರ ಸಾಲಕೊಡುವವರಿಗೂ ತೊಂದರೆಯಾಗದಂತೆ ಗಮನಹರಿಸಬೇಕೆಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತು ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಅನುಷ್ಠಾನ ಕುರಿತು ಸಭೆ ಜರುಗಿಸಿ ಮಾತನಾಡಿದರು.
ಸುಗ್ರೀವಾಜ್ಞೆಯಿಂದ ನಿಯಮಾನುಸಾರ ಸಾಲ ನೀಡುವ ಲೇವಾದೇವಿಗಾರರಿಗೆ ಹಾಗೂ ಮನಿಲ್ಯಾಂಡರ್ ಅವರಿಗೆ ತೊಂದರೆ, ಕಿರುಕುಳ ಆಗದಂತೆ ಅಧಿಕಾರಿಗಳು ಗಮನ ಹರಿಸಬೇಕು. ಬಡವರು, ಮಹಿಳೆಯರು ಮತ್ತು ರೈತರಿಗೆ ಸಾಲ ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್‍ದವರಿಂದ ಯಾವುದೇ ಕಿರುಕುಳ, ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿದೆ ಎಂದರು.
ಬೆಳಿಗ್ಗೆ 9 ಗಂಟೆಗೆ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಸಾಲಗಾರರ ಮನೆಗೆ ಸಾಲ ವಸೂಲಾತಿಗಾಗಿ ಹೊಗಬಾರದು. ಬಲವಂತದ ವಸೂಲಾತಿಯನ್ನು ತಡೆಯಲು ಈ ಕಾನೂನು ಜಾರಿ ಮಾಡಲಾಗಿದೆ. ರಾಜ್ಯದಲ್ಲಿ 2022 ರಿಂದ 2025ರವರೆಗೆ ಇಂತಹ ಪ್ರಕರಣಗಳನ್ನು ಗಮನಿಸಿದಾಗ ಕಳದ 2 ತಿಂಗಳಲ್ಲಿ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಮೈಕ್ರೋ ಫೈನಾನ್ಸ್‍ಗಳಿಂದ ಸಾಲ ಪಡೆದವರಿಗೆ ಆಗುವ ಕಿರುಕುಳವನ್ನು ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ ಎಂದರು.
ಸುಗ್ರೀವಾಜ್ಞೆಯನ್ನು ಅಧಿಕಾರಿಗಳು ಸರಿಯಾಗಿ ಅಧ್ಯಯನ ಮಾಡಿ, ಜಾರಿ ಮಾಡಬೇಕು. ಡಿಸಿ, ಎಸ್.ಪಿ ಅವರು ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾಲ ವಸೂಲಾತಿಗಾಗಿ ಅನಗತ್ಯ ಕಿರುಕುಳ, ತೊಂದರೆ ಆಗುವಂತಹ ಪ್ರಕರಣಗಳನ್ನು ನಿಯಂತ್ರಿಸಿ, ಪ್ರಕರಣಗಳು ಶೂನ್ಯ ಆಗುವಂತೆ ಕ್ರಮಕೈಗೊಳ್ಳಲು ನಿರ್ದೇಶಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ವಿಡಿಯೋ ಸಂವಾದ ನಿರ್ವಹಿಸಿ, ಡಿಸಿ, ಎಸ್‍ಪಿಗಳಿಗೆ ನಿರ್ದೇಶನ ನೀಡಿ, ಮುಖ್ಯಮಂತ್ರಿಗಳು ನೀಡಿದ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಿ. ವೆಂಕಟೇಶ್, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕುರಿತ ಸುಗ್ರೀವಾಜ್ಞೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. ಮತ್ತು ಮೈಕ್ರೋ ಫೈನಾನ್ಸ್‍ದಾರರು, ಲೇವಾದೇವಿಗಾರರು, ಪಾನ್‍ಬ್ರೋಕರ್ ಗಳ ಸಭೆ ಕರೆದು ಮತ್ತೊಮ್ಮೆ ತಿಳುವಳಿಕೆ ನೀಡಲಾಗುವುದು. ಸಾರ್ವಜನಿಕರಲ್ಲಿ ಸುಗ್ರೀವಾಜ್ಞೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.




