ನವದೆಹಲಿ: ಚಿಕ್ಕಬಳ್ಳಾಪುರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದ ಅವರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲು ನಾನು 2007 ರಿಂದಲೂ ಪ್ರಯತ್ನ ಮಾಡುತ್ತಿದ್ದೇನೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಭಾಗಕ್ಕೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿದ ನೀರನ್ನು ಹರಿಸುವ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಅನೇಕ ಉತ್ತಮ ಯೋಜನೆಗಳನ್ನು ರದ್ದು ಮಾಡಿದೆ. ಅದೇ ರೀತಿ ಮೂರನೇ ಹಂತದ ಸಂಸ್ಕರಣೆಯ ಯೋಜನೆಯನ್ನು ಕೂಡ ರದ್ದು ಮಾಡಿದೆ ಎಂದರು.
ಬಯಲುಸೀಮೆಗೆ ಈಗಾಗಲೇ ಪೂರೈಕೆಯಾಗುತ್ತಿರುವ ದ್ವಿತೀಯ ಹಂತದ ಸಂಸ್ಕರಣೆಯ ನೀರನ್ನು ಕೆಲವು ಸಂಸ್ಥೆಗಳು ಪರೀಕ್ಷೆ ಮಾಡಿದ್ದು, ಎರಡು ಹಂತದಲ್ಲಿ ಸಂಸ್ಕರಿಸಿದ ನೀರು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ವರದಿ ನೀಡಿವೆ. ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲೇ ಸಂಸ್ಕರಣೆ ಮಾಡಿ ಬಳಕೆ ಮಾಡಬೇಕೆಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಈಗಾಗಲೇ ತಿಳಿಸಲಾಗಿದೆ. ಮೊದಲಿಗೆ ಈ ನಿಯಮವನ್ನು ಕರ್ನಾಟಕ ಸರ್ಕಾರ ಅನುಷ್ಠಾನ ಮಾಡಬೇಕಿದೆ. ಜೊತೆಗೆ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಶಾಶ್ವತ ನೀರಾವರಿ ಕಲ್ಪಿಸಲು ಕೃಷ್ಣ ನದಿಯಿಂದ ಕನಿಷ್ಠ 15 ಟಿಎಂಸಿ ನೀರನ್ನು ತಂದು ಬಯಲುಸೀಮೆಗೆ ನೀಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.




