ಹಾಸನ: ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರ ಜೊತೆಗೆ, ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಬಡ ಮಕ್ಕಳಿಗೂ ಸಹ ಪ್ರತಿಭಾ ಪುರಸ್ಕಾರವನ್ನು ಮಾಡಬೇಕು ಎಂದು ಶಾಸಕ ಸ್ವರೂಪ್ ಪ್ರಕಾಶ್ ಕರೆನೀಡಿದರು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ (ನೋಂ) ವತಿಯಿಂದ ನಗರದ ಜಿಲ್ಲಾ ನಿವೃತ್ತ ನೌಕರರ ಸಮುದಾಯ ಭವನದಲ್ಲಿಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಮಾಜಿ ಶಾಸಕ ಹೆಚ್.ಎಸ್ ಪ್ರಕಾಶ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನನ್ನ ತಂದೆಯವರನ್ನು ನೆನೆಸಿಕೊಂಡು ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದು ಮಗನಾಗಿ ನನಗೆ ಬಹಳ ಸಂತೋಷವಾಗುತ್ತಿದೆ ಎಂದರು.
ಕಳೆದ ಎರಡು ವರ್ಷಗಳ ಹಿಂದೆ ಶಾಸಕನಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಬಂದಾಗ ಕಟ್ಟಡ ದುಸ್ಥಿತಿಯಲ್ಲಿದೆ ಅದನ್ನು ಸರಿಪಡಿಸಿಕೊಡಬೇಕು ಎಂದು ಕೆಲವು ಬೇಡಿಕೆಗಳನ್ನು ಇಟ್ಟಿದ್ದರು. ಅದನ್ನು ಖಂಡಿತವಾಗಿಯೂ ಸರಿಪಡಿಸಿ ಕೊಡುವಂತಹ ಕೆಲಸವನ್ನು ಮಾಡುತ್ತೇನೆ ಎಂದರು.




