ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚೈಲ್ಡ್ ಫಂಡ್ ಇಂಡಿಯಾ ಏರ್ಪಡಿಸಿದ್ದ ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳು ನಮ್ಮ ದೇಶದ ಭವಿಷ್ಯ, ಆದರೆ ಇಂದು ಮಕ್ಕಳ ಬೆಳವಣಿಗೆಗೆ ಮೊಬೈಲ್ ಅಡ್ಡಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಮ್ಮ ಕಾಲದಲ್ಲಿ ಮೊಬೈಲ್ ಗೀಳು ಇರಲಿಲ್ಲ, ನಾವು ಕೇಳಿ, ನೋಡಿ ಕಲಿಯುತ್ತಿದ್ದೇವು. ಆದರೆ, ಇಂದಿನ ಮಕ್ಕಳಿಗೆ ಎಲ್ಲವೂ ರೆಡಿಮೇಡ್ ಸಿಗುತ್ತಿವೆ. ಇಂದಿನ ಮಕ್ಕಳು ಹುಟ್ಟಿನಿಂದಲೇ ಮೊಬೈಲ್ ನೋಡುತ್ತಾ ಬೆಳೆಯುತ್ತಾರೆ. ಅವರಿಗೆ ಎಲ್ಲವೂ ಕುಂತಲ್ಲೇ, ನಿಂತಲ್ಲೇ ಸಿಗುತ್ತವೆ. ಇದು ಮಕ್ಕಳ ಬೆಳವಣಿಗೆಗೆ ಮಾರಕವಾಗಿದೆ ಎಂದರು.
ಇಂದು ಲ್ಯಾಪ್‌ಟಾಪ್, ಮೊಬೈಲ್ ಬಳಸುವವರ ಸಂಖ್ಯೆ, ನಗರ ಪ್ರದೇಶದವರಿಗಿಂತ ಗ್ರಾಮಾಂತರ ಪ್ರದೇಶದವರೆ ಅಧಿಕವಾಗಿದ್ದಾರೆ. ಶೇಕಡ 78 ರಷ್ಟು ಮಂದಿ ಗ್ರಾಮೀಣ ಪ್ರದೇಶದವರು ಮೊಬೈಲ್, ಲಾಪ್‌ಟಾಪ್ ಉಪಯೋಗಿಸುತ್ತಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಉಪಯೋಗಿಸುತ್ತಿದ್ದಾರೆ ಎಂದರು.
ಸಾಮಾಜಿಕ ಜಾಲತಾಣಗಳ ಪಿಡುಗಿನಿಂದ ಶೋಷಣೆಗೊಳದಾದವರು ಪ್ರತಿದಿನ ನನ್ನ ಬಳಿ ದೂರು ತೆಗೆದುಕೊಂಡು ಬರುತ್ತಾರೆ, 14 ರಿಂದ 18 ವರ್ಷದ ಮಕ್ಕಳು ಅತಿಹೆಚ್ಚು ಆನ್‌ಲೈನ್ ಗೀಳಿಗೆ ಸಿಲುಕುತ್ತಿದ್ದಾರೆ, ಇದು ನಿಜಕ್ಕೂ ಕಳವಳಕಾರಿ. ಕಾನೂನು, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಇಲಾಖೆ ಒಳಗೊಂಡಂತೆ ಸಮಿತಿ ಮಾಡಿದರೂ ಸಾಮಾಜಿಕ ಜಾಲತಾಣದ ಪಿಡುಗನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಪೊಲೀಸರು, ಶಾಲಾ, ಕಾಲೇಜುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಸಾಮಾಜಿಕ ಜಾಲತಾಣದ ಬಗ್ಗೆ ಅರಿವು ಮೂಡಿಸಬೇಕು. ಶಾಲೆಗಳಿಗೆ ಹೋಗಿ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು, ಮಕ್ಕಳು ನಮ್ಮ ಸಮಾಜದ ಭವಿಷ್ಯ, ಮಕ್ಕಳನ್ನು ತಿದ್ದಿ ತೀಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.




