ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆ: ಮಧು ಬಂಗಾರಪ್ಪ

2 years ago

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡೂ ಮಾಧ್ಯಮಗಳಲ್ಲಿ ಬೋಧನೆಯ ಸೌಲಭ್ಯವನ್ನು ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದ್ದು, ಮಾಧ್ಯಮದ ಆಯ್ಕೆ ಸ್ವಾತಂತ್ರ್ಯವನ್ನು ಪೋಷಕರಿಗೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಇಂಗ್ಲಿಷ್ ಮಾಧ್ಯಮದ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಅದರ ಜೊತೆಗೆ ಕನ್ನಡ ಮಾಧ್ಯಮವನ್ನೂ ಉಳಿಸಲು ಸರ್ಕಾರ ಬದ್ಧವಾಗಿದೆ. ಕಳೆದ 2 ವರ್ಷಗಳಿಂದಲೂ 59 ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಆದ್ಯತೆ ನೀಡಲಾಗಿದೆ. ಕೆಲವೆಡೆ ವಿದ್ಯಾರ್ಥಿಗಳ ಕೊರತೆಯಿದೆ. ಮೂಲ ಸೌಲಭ್ಯದ ಸಮಸ್ಯೆ ಕೂಡ ಇದೆ. ನಮ್ಮ ಸರ್ಕಾರ ಸಾಮಾಜಿಕ ಹೊಣೆಗಾರಿಕೆ ನಿಯನ್ನು ಬಳಸಿಕೊಂಡು ಮೂಲಸೌಲಭ್ಯ ಹೆಚ್ಚಿಸಿ, ಇಂಗ್ಲೀಷ್ ಮಾಧ್ಯಮ ಸರ್ಕಾರಿ ಶಾಲೆಗೂ ಹಣ ಕೊಟ್ಟು ಸೇರಿಸಬೇಕಾದಂತಹ ಮಟ್ಟಕ್ಕೆ ಸುಧಾರಣೆ ತರಲಾಗುವುದು ಎಂದರು.

2025 ರ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಂತಹಂತವಾಗಿ ಈ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಶಿಕ್ಷಕರು ಮೂಲಸೌಲಭ್ಯಕ್ಕೆ ಒತ್ತು ನೀಡಲಾಗುವುದು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Leave a Reply