ಕುಡಿಯುವ ನೀರು ಸರಬರಾಜು ವ್ಯವಸ್ಥೆ ಪರಿಶೀಲಿಸಿ, ವರದಿ ಸಲ್ಲಿಕೆ
ಅಗತ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ, ಗ್ರಾಮಸ್ಥರೊಂದಿಗಿನ ಸಂವಹನದ ಕೊರತೆಯಿಂದಾಗಿ ಹೆಬ್ಬಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜುದಲ್ಲಿ ವ್ಯತ್ಯಾಸವಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಕುರಿತು ಗಮನಕ್ಕೆ ಬಂದ ತಕ್ಷಣ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ ತಹಶೀಲ್ದಾರ ಡಾ.ಡಿ.ಎಚ್.ಹೂಗಾರ ನೇತೃತ್ವದಲ್ಲಿ ಇಓ ಸುಭಾಸ ಸಂಪಗಾಂವಿ, ಗ್ರಾಮೀಣ ಕುಡಿಯುವ ನೀರು ಇಲಾಖೆ, ನರೇಗಾ ಎಡಿ ಮತ್ತು ಸಂಬಂಧಿಸಿದ ಇತರ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡವನ್ನು ಪರಿಶೀಲಿಸಿ ವರದಿ ನೀಡಲು ಮತ್ತು ಕೈಗೊಳ್ಳಬೇಕಾದ ತುರ್ತು ಕ್ರಮಗಳನ್ನು ಶಿಫಾರಸ್ಸು ಮಾಡಲು ಸೂಚಿಸಿ, ಕಳುಹಿಸಿದ್ದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ತಹಶೀಲ್ದಾರ ಡಾ.ಡಿ.ಎಚ್.ಹೂಗಾರ ನೇತೃತ್ವದ ತಂಡವು ಹೆಬ್ಬಳ್ಳಿ ಗ್ರಾಮದಲ್ಲಿರುವ ಮೇಲ್ಮಟ್ಟದ ಜಲ ಸಂಗ್ರಹಗಾರ(ಓಎಚ್‍ಟಿ), ನೆಲಮಟ್ಟದ ಜಲ ಸಂಗ್ರಹಗಾರ ಹಾಗೂ ಅಮ್ಮಿನಭಾವಿಯಿಂದ ಕುಡಿಯುವ ನೀರು ಸರಬರಾಜು ಆಗುವ ಪೈಪ್‍ಲೈನ್ ವ್ಯವಸ್ಥೆ ಪರಿಶೀಲಿಸಿತು. ಗ್ರಾಮಸ್ಥರು ಪ್ರತಿನಿತ್ಯ ಕುಡಿಯುವ ನೀರಿನ ಸರಬರಾಜುದಲ್ಲಿ ವಿಳಂಬ, ವ್ಯತ್ಯಯವಾಗುತ್ತಿರುವುದನ್ನು ವಿವರಿಸಿದರು.

ಪ್ರಮುಖವಾಗಿ ಅಮ್ಮಿನಭಾವಿಯಿಂದ ಹೆಬ್ಬಳ್ಳಿಗೆ ನೀರು ಸರಬರಾಜು ಮಾಡುವ ಪೈಪ್‍ಗಳನ್ನು ಪರಿಶೀಲಿಸಬೇಕು. ಓಎಚ್‍ಟಿ ಬದಲಾಯಿಸಬೇಕು ಮತ್ತು ಗ್ರಾಮದ ಜನಸಂಖ್ಯೆ ಹೆಚ್ಚು ಇರುವದರಿಂದ ಇನ್ನೊಂದು ದೊಡ್ಡ ಜಲಸಂಗ್ರಗಾರ ಕಟ್ಟಿಸಬೇಕೆಂದು ಗ್ರಾಮಸ್ಥರು ತಿಳಿಸಿದರು.
ಈ ಎಲ್ಲ ವಿಚಾರಗಳನ್ನು ತಹಶೀಲ್ದಾರ ಅವರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಗಮನಕ್ಕೆ ದೂರವಾಣಿ ಮೂಲಕ ತಿಳಿಸಿದಾಗ, ಕುಡಿಯುವ ನೀರಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ತಕ್ಷಣ ತಾಲೂಕು ಟಾಸ್ಕ್ ಫೋರ್ಸ್ ಸಮಿತಿಗೆ ಸಲ್ಲಿಸಿ, ಅನುಷ್ಠಾನಕ್ಕೆ ಅನುಮೋದನೆ ಪಡೆಯಬೇಕು, ಹೆಬ್ಬಳ್ಳಿ ದೊಡ್ಡ ಗ್ರಾಮ, ಅಂದಾಜು 20 ಸಾವಿರದಷ್ಟು ಜನಸಂಖ್ಯೆ ಹೊಂದಿರುವ ಗ್ರಾಮವಾಗಿರುವದರಿಂದ ಸುಮಾರು ಎರಡು ಲಕ್ಷ. ಲೀಟರ್ ನೀರು ಸಂಗ್ರಹಣಾ ಸಾಮಥ್ರ್ಯದ ನೆಲಮಟ್ಟದ ಜಲಸಂಗ್ರಹಗಾರ ನಿರ್ಮಿಸಲು ಜಲ್ ಜೀವನ್ ಮಿಷನ್ ಯೋಜನೆಯಡಿ, ಈಗಾಗಲೇ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳು ತಿಳಿಸಿದ್ದು, ಸದರಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಗ್ರಾಮ ಪಂಚಾಯತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಹೆಬ್ಬಳ್ಳಿ ಗ್ರಾಮದಲ್ಲಿರುವ ಮೇಲ್ಮಟ್ಟದ ಜಲಸಂಗ್ರಹಗಾರ ಕೇವಲ 14 ವರ್ಷ ಹಳೆಯದಾಗಿದ್ದು, ಸುಸ್ಥಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಹಿರಿಯ ಇಂಜನಿಯರ್ ಗಳಿಂದ ಅದರ ಸಾಮರ್ಥ್ಯ ಮತ್ತು ಗುಣಮಟ್ಟವನ್ನು ಮರು ಪರಿಶೀಲನೆ ಮಾಡಿಸುತ್ತೆನೆ. ಹೆಬ್ಬಳ್ಳಿ ಗ್ರಾಮಕ್ಕೆ ಅಂತರ ನಿಲುಗಡೆ ಇಲ್ಲದೆ ಕುಡಿಯುವ ನೀರು ನಿರಂತರವಾಗಿ ಸರಬರಾಜು ಆಗುತ್ತಿದೆ. ಮುಂಗಾರು ಪೂರ್ವದ ಮಳೆ,ಗಾಳಿ ಇತರ ಕಾರಣಗಳಿಂದ ಆಗು ಹಠಾತ್ ವಿದ್ಯುತ್ತ ನಿಲುಗಡೆ, ಆಕಸ್ಮಿಕವಾಗಿ ಉಂಟಾಗುವ ಪೈಪ್ ಸೋರಿಕೆಗಳಿಂದ ಸ್ವಲ್ಪ ಮಟ್ಟಿಗೆ ಯೊಂದರೆ ಆಗಿರಬಹುದು. ಎಲ್ಲವನ್ನು ಸರಿಪಡಿಸಿ ಕ್ರಮವಹಿಸಲು, ಗ್ರಾಮ ಪಂಚಾಯತ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಇಂತಹ ಬರ ಪರಿಸ್ಥಿಯಲ್ಲಿಯೂ ತೊಂದರೆ ಆಗದಂತೆ ಕುಡಿಯುವ ನೀರು ಪೂರೈಕೆ ಮಾಡಲು ಗ್ರಾಮಸ್ಥರ, ಸಾರ್ವಜನಿಕರ ಸಹಕಾರವು ಬೇಕು. ಈ ಕುರಿತು ಗ್ರಾಮಸ್ಥರಿಗೆ ಇನ್ನಷ್ಟು ಮನವರಿಕೆ ಮಾಡಲು ಮತ್ತು ಸದಾಕಾಲ ಜಿಲ್ಲಾಡಳಿತ, ತಾಲೂಕು ಆಡಳಿತ ನಿಮ್ಮೊಂದಿಗೆ ಎಂದು ತಿಳಿಸಲು ತಹಶೀಲ್ದಾರರಿಗೆ ತಿಳಿಸಿದರು.

ಅದರಂತೆ ತಹಶೀಲ್ದಾರ ಡಾ.ಡಿ.ಎಚ್.ಹೂಗಾರ, ಸಭೆಗೆ ಜಿಲ್ಲಾಧಿಕಾರಿಗಳ ಸಂದೇಶದ ಮಾಹಿತಿ ನೀಡಿ, ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಾಂತ್ರಿಕ ಕಾರಣದಿಂದ ಕೆಟ್ಟಿದ್ದ ಬೋರವೇಲ್ ದುರಸ್ತಿ ಮಾಡಿಸಿ, ಗ್ರಾಮಸ್ಥರ ಸಮ್ಮುಖದಲ್ಲಿ ಮರುಚಾಲನೆಗೊಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಗಾಂವಿ, ಸಹಾಯಕ ನಿರ್ದೇಶಕ ನಿರ್ದೇಶಕರು(ಗ್ರಾಉ) ಚಂದ್ರು ಪೂಜಾರ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜನೀಯರ ಚಂದ್ರಶೇಖರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಮಾದನಬಾವಿ ಸೇರಿದಂತೆ ಗ್ರಾಮಸ್ಥರು ಇದ್ದರು.




