ದಾವಣಗೆರೆ: ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಎಸ್ ಡಿ ಪಿ ಐ ಜಿಲ್ಲಾ ಉಪಾಧ್ಯಕ್ಷರಾದ ರಜ್ವಿ ರಿಯಾಜ್ ಅಹಮದ್ ನೇತೃತ್ವದಲ್ಲಿ ಅಹಮದ ನಗರ ವೃತ್ತದಲ್ಲಿ ಬಿಲ್ ನ ಪ್ರತಿಯನ್ನು ಹರಿದು ಸುಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಝ್ ಅಹಮದ್, ಈ ಮಸೂದೆ ಅಸಾಂವಿಧಾನಿಕ ಮಾತ್ರವಲ್ಲದೇ ವಕ್ಫ್ ಸಂಪತ್ತನ್ನು ಕಳಿಸುವ ಕೋಮುವಾದಿ ಸರ್ಕಾರದ ಹುನ್ನಾರ ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು – ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ. ಈ ಮಸೂದೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ದೇಶದಾದ್ಯಂತ CAA, NRC ಮಾದರಿಯ ಭಾರಿ ಪ್ರತಿಭಟನೆಗಳು ನಡೆಯಲಿವೆ ಎಂದರು.
ನಾವು ಇಂದು ಇಲ್ಲಿ ಸೇರಿರುವುದು ಭಾರತದ ಮುಸ್ಲಿಂ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ವಕ್ಫ್ ಆಸ್ತಿಗಳ ರಕ್ಷಿಸುವ ಬಗ್ಗೆ ಅಲ್ಲ ಮೋದಿ ಸರ್ಕಾರ ಈ ಮಸೂದೆಯ ಮೂಲಕ ವಕ್ಫ್ ಬೋರ್ಡ್ ಮೇಲೆ ಹಿಂದುತ್ವ ಆದರ್ಶಗಳನ್ನು ಬಲಾತ್ಕಾರವಾಗಿ ಹೇರಲು ಯತ್ನಿಸುತ್ತಿದೆ, ಇದು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಗೆ ವಿರುದ್ಧವಾದದ್ದು ಎಂದರು.
. ತಿದ್ದುಪಡಿಯ ಹಿಂದಿನ ಅಸಲಿ ಉದ್ದೇಶ
• ವಕ್ಫ್ ಕಾಯ್ದೆಯ ಅನುಷ್ಠಾನವನ್ನು BJP ತನ್ನ ಬಹುಮತದ ಬಲದಿಂದ ದುರುಪಯೋಗಪಡಿಸಿಕೊಂಡು ದೇಶವನ್ನು ಕೇಸರಿ ಬಣ್ಣದಿಂದ ಮುಚ್ಚಲು ಪ್ರಯತ್ನಿಸುತ್ತಿದೆ.
• ಈ ಮಸೂದೆ ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿ, ಹಾಗೆಯೇ ವಕ್ಫ್ ಸಂಸ್ಥೆಗಳ ಶಕ್ತಿಯನ್ನು ಕುಂದಿಸುತ್ತಿವೆ.
• ಈಗಿನ ಕಾನೂನುಗಳು ಹಿಂದೂ ಧಾರ್ಮಿಕ ಆಸ್ತಿಗಳನ್ನು ಹಿಂದೂ ಅಲ್ಲದವರಿಂದ ನಿರ್ವಹಿಸುವಂತಾಗಲು ನಿರ್ಬಂಧಿಸುತ್ತವೆ. ಆದರೆ ಹೊಸ ವಕ್ಫ್ ಮಸೂದೆಯಡಿಯಲ್ಲಿ, ವಕ್ಫ್ ಬೋರ್ಡ್ ಸದಸ್ಯರ ಬಹುಪಾಲು—ಸಿಇಒ ಸಹ ಮುಸ್ಲಿಮ್ ಆಗಿರುವ ಅವಶ್ಯಕತೆ ಇಲ್ಲ. ಇದು ವಕ್ಫ್ ಆಡಳಿತವನ್ನು ಕಬಳಿಸಲು ಮಾಡಿದ ಸಂಚು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಯಾಹಿಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಆರ್ ತಾಹೀರ್, ಜಿಲ್ಲಾ ಕೋಶಾಧಿಕಾರಿ ಮೊಹಮ್ಮದ್ ಅಜರುದ್ದೀನ್, ಜಿಲ್ಲಾ ಕಾರ್ಯದರ್ಶಿಗಳಾದ ಮಹಮ್ಮದ್ ಮೋಹಸಿನ್ ಮತ್ತು ಮಹಮ್ಮದ್ ಜುನೈದ್, ಜಿಲ್ಲಾ ಸಮಿತಿ ಸದಸ್ಯರಾದ ರೆಹಮಾನ್ ಸಾಬ್, ಝಬಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಏಜಾಜ್ ಅಹಮದ್, ಹರಿಹರ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಮಿಉಲ್ಲಾ ಮುಜಾವರ್ ಮತ್ತಿತರರು ಹಾಜರಿದ್ದರು.




