ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ತಾಂತ್ರಿಕ ಬಲವರ್ಧನೆ: ಜಿ ಪರಮೇಶ್ವರ್

1 year ago

ಬೆಂಗಳೂರು: ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದಿಂದ (ಸಿಸಿಐಟಿಆರ್) ಈವರೆಗೆ 46 ಸಾವಿರಕ್ಕು ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳು ತರಬೇತಿ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಕೇಂದ್ರ ಅಪರಾಧ ಇಲಾಖೆ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜೊತೆಗೆ ‘ಸೈಬರ್ ಅಪರಾಧ ತನಿಖಾ’ 4ನೇ ಆವೃತ್ತಿಯ ಕೈಪಿಡಿಯನ್ನು ಬಿಡುಗಡೆ ಮಾಡಿದೆ. ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದೆ. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ತರಬೇತಿ ನೀಡಲಾಗುವುದು. ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ತಾಂತ್ರಿಕ ಬಲವರ್ಧನೆಯನ್ನು ಹೆಚ್ಚಿಸಲಾಗುವುದು ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ, ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಿಇಒ ವಿನಾಯಕ ಗೋಡ್ಸೆ, ಇನ್ಫೋಸಿಸ್ ಸಂಸ್ಥೆ ಟ್ರಸ್ಟಿ ಸುನೀಲ್ ಕುಮಾರ್ ಧಾರೇಶ್ವರ್ ಮೊದಲಾದವರು ಹಾಜರಿದ್ದರು.

Leave a Reply