ಬೆಂಗಳೂರು: ಖಾಸಗಿ ಸಂಸ್ಥೆಯೊಂದರ ಸೆಮಿನಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದ ತೇಜಸ್ವಿ ಸೂರ್ಯ ಮತ್ತು ಮೋಹನ್ ದಾಸ್ ಪೈ ಅವರು, ನೋ ಮೋರ್ ಬಿಎಂಟಿಸಿ ಹಾಗೂ ನೋ ಮೋರ್ ಮೊನೋಪೊಲಿ ಎಂದು ಹೇಳಿಕೊಂಡಿದ್ದರು. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದ ಖಾಸಗಿ ಬಾಡಿಗೆ ವಾಹನಗಳನ್ನು ಪೂರೈಕೆ ಮಾಡುವ ಕಂಪನಿಯೊಂದರ ಕಾರ್ಯಕ್ರಮದಲ್ಲಿ ಇಬ್ಬರು ಭಾಗಿಯಾಗಿದ್ದರು. ಅಲ್ಲಿ ಬಿಎಂಟಿಸಿ ಬೇಡ, ಬಿಎಂಟಿಸಿ ಮೊನೋಪೊಲಿ ಬೇಡ ಎಂದಿದ್ದಾರೆ. ಸರ್ಕಾರಿ ವ್ಯವಸ್ಥೆಗಳಿಗೆ ಜನಪ್ರತಿನಿಧಿಗಳು ಬೆಂಬಲ ಕೊಡಬೇಕು. ಆದರೆ ಇವರು ಖಾಸಗಿ ಕಂಪನಿಗಳಿಗೆ ಬೆಂಬಲ ಕೊಡ್ತಿದ್ದಾರೆ ಎಂದು ಕಿಡಿಕಾರಿದರು.
ಆರ್ಥಿಕವಾಗಿ ದುರ್ಬಲ ವರ್ಗ ಬಸ್ ಗಳಲ್ಲಿ ಓಡಾಡುತ್ತಾರೆ. ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಇದೆ. ಆದರೆ ತೇಜಸ್ವಿ ಸೂರ್ಯ, ಮೋಹನ್ ದಾಸ್ ಪೈ ಬಂಡವಾಳ ಶಾಹಿಗಳಿಗೆ ಬೆಂಬಲ ಕೊಡ್ತಿದ್ದಾರೆ. ಖಾಸಗಿ ಸಂಸ್ಥೆಗಳು ನಷ್ಟದಲ್ಲಿ ವಾಹನಗಳನ್ನು ಓಡಿಸಲ್ಲ. ಆದರೆ ಸರ್ಕಾರ ಲಾಭದ ಉದ್ದೇಶದಿಂದ ಸಾರಿಗೆ ಸಂಸ್ಥೆ ನಡೆಸುವುದಿಲ್ಲ. ಬಿಎಂಟಿಸಿಯಲ್ಲಿ ಪ್ರತಿನಿತ್ಯ 48 ಲಕ್ಷ ಪ್ರಯಾಣಿಕರು ಓಡಾಡುತ್ತಾರೆ ಎಂದು ವಿವರಿಸಿದರು.




