ಹೈದರಾಬಾದ್: ತೆಲಂಗಾಣ ಬಿಜೆಪಿ ಸ್ಥಳೀಯ ನಾಯಕನನ್ನು ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕಾರ್ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಕೂಡಿ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆಗೈದಿದ್ದಾರೆ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮೇದಕ್ ಪೊಲೀಸ್ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಕೆಲ ಅಪರಿಚಿತರು ಳು ಬಿಜೆಪಿ ನಾಯಕನನ್ನು ಕಾರಿನ ಡಿಕ್ಕಿಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಕರಣದ ಸಂಬಂಧ ತನಿಖೆ ಆರಂಭವಾಗಿದೆ ಎಂದಿದ್ದಾರೆ.



