ಬೆಂಗಳೂರು: ಈ ವರ್ಷ ರಾಜ್ಯದಲ್ಲಿ ಅವಧಿಗೆ ಮುನ್ನವೇ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದರೆ ಇದಕ್ಕೂ ಮುನ್ನ ಬೇಸಿಗೆಯಲ್ಲಿ ಬಿರು ಬಿಸಿಲು ಜನರನ್ನು ಹೈರಾಣರನ್ನಾಗಿಸುತ್ತದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಹವಾಮಾನದಲ್ಲಿ ಆಗುತ್ತಿರುವ ವೈಪರಿತ್ಯದ ಪರಿಣಾಮವಾಗಿ ಕಳೆದ ಬಾರಿ ಮಳೆ ಮಾರುತಗಳಲ್ಲೂ ಸಾಕಷ್ಟು ವ್ಯತ್ಯಾಸ ಉಂಟಾಗಿತ್ತು. ಈಗ ಅದು ಮತ್ತೆ ಮುಂದುವರೆದಿದ್ದು ಮಾರ್ಚ್ ಏಪ್ರಿಲ್ ಮತ್ತು ಮೇ ಮಧ್ಯಭಾಗದವರೆಗೆ ಬಿಸಿಲಿನ ಆರ್ಭಟ ಜೋರಾಗಿರುತ್ತದೆ. ಬೆಂಗಳೂರು ನಗರದಲ್ಲಿಯೇ ಈ ಅವಧಿಯಲ್ಲಿ ಬಿಸಿಲು 40 ಡಿಗ್ರಿ ಆಸುಪಾಸಿನಲ್ಲಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಬಿಸಿಲು ಅಧಿಕವಾಗಿದೆ. ಇದು ಹೀಗೆ ಮುಂದುವರಿದು ಮಾರ್ಚ್ ನಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಮುಟ್ಟಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಇದಕ್ಕೆ ಗಾಳಿ ಬೀಸುವ ದಿಕ್ಕು ಕಾರಣ ಎನ್ನಲಾಗಿದೆ. ಚಳಿಗಾಲದಲ್ಲಿ ಗಾಳಿಯ ದಿಕ್ಕು ಉತ್ತರದಿಂದ ಬೀಸಿದರೆ ಚಳಿ ತೀವ್ರತೆ ಹೆಚ್ಚುತ್ತದೆ. ಪೂರ್ವ ದಿಕ್ಕಿನಿಂದ ಗಾಳಿ ಬೀಸಿದಾಗ ವಾತಾವರಣ ಉಷ್ಣದಿಂದ ಕೂಡಿರುತ್ತದೆ.
ಬಯಲುಸೀಮೆ, ಉತ್ತರ ಕರ್ನಾಟಕ ಮಾತ್ರವಲ್ಲದೆ, ಬೆಂಗಳೂರಲ್ಲೂ ಬಿಸಿಲಿನ ಬೇಗೆ ಹೆಚ್ಚಾಗಿದೆ. ಮಾರ್ಚ್‌ನಿಂದ ಬೇಸಿಗೆ ಆರಂಭಗೊಳ್ಳಲಿದ್ದು, ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲು ಹಾಗೂ ಸೆಕೆ ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ ಮೊದಲ ವಾರವೇ 32ರಿಂದ 37 ಡಿಗ್ರಿಯವರೆಗೂ ತಾಪಮಾನ ದಾಖಲಾಗುತ್ತಿದೆ.
ಕರಾವಳಿ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ 33-34 ಡಿಗ್ರಿ ಸೆಲ್ಸಿಯಸ್, ಉತ್ತರ ಒಳನಾಡಿನ ಕರ್ನಾಟಕದ ಪ್ರದೇಶಗಳಲ್ಲಿ 34 ರಿಂದ 37°C, ಆಗುಂಬೆ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಮೈಸೂರು, ಚಿಂತಾಮಣಿ ಮತ್ತು ಮಡಿಕೇರಿಗಳಲ್ಲಿ 31-33°C ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗಗಳಲ್ಲಿ 34-37°C ನಷ್ಟು ದಾಖಲಾಗಿದೆ.
ಮುಂದಿನ ಒಂದು ವಾರದಲ್ಲಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4°C ಮತ್ತು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 2-3°C ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3°C ರಷ್ಟು ಹೆಚ್ಚಾಗುವ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 1-2°C ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.




