8 ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧ
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅದೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು.
• ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು.
• ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ.
• ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು.
• ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ಗೇಟು ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ.
• ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು.
• ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ.
• ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ.
• ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ.
• 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು.
• ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ.
ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ.




