ಶಿವಮೊಗ್ಗ: ಕಾಶ್ಮೀರದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸೇರಿದಂತೆ ಕಣಿವೆ ರಾಜ್ಯದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಸುಧಾರಣಾ ಕ್ರಮಗಳನ್ನು ಸಹಿಸದೇ ಅದಕ್ಕೆ ಕೊಳ್ಳಿ ಇಡಲು ಉಗ್ರರ ದಾಳಿ ನಡೆದಿದೆ ಎಂದು ಕೇಂದ್ರ ಸಚಿವ ಪಲ್ಹಾದ ಜೋಶಿ ಹೇಳಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ ರಾವ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಅವರು ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಾವು ಆದರೂ ಅದನ್ನು ಸಹಿಸುವುದಿಲ್ಲ. 26 ಪ್ರವಾಸಿಗರ ಸಾವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಭಯೋತ್ಪಾದಕರು ಹಾಗೂ ಅದನ್ನು ಬೆಂಬಲಿಸುವವರಿಗೆ ತಕ್ಕ ಶಾಸ್ತಿ ಮಾಡದೇ ಭಾರತ ಸರ್ಕಾರ ವಿರಮಿಸುವುದಿಲ್ಲ ಎಂದರು.
ದೇಶದಲ್ಲಿ ಮೊದಲಿದ್ದ ಭಯೋತ್ಪಾದಕ ಚಟುವಟಿಕೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ತಬ್ಧಗೊಳಿಸಿತ್ತು. ಈಗ ಮತ್ತೆ ಅದು ಗರಿಗೆದರಿದೆ. ಅದನ್ನು ಹತ್ತಿಕ್ಕಲು ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕವಾಗಿ ಐದು ಕ್ರಮ ಈಗಾಗಲೇ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ನಮ್ಮ ಜನರಿಗೆ ಯಾರು ನೋವು ಕೊಟ್ಟಿದ್ದಾರೊ ಅವರಿಗೆ ಭಾರತ ಸರ್ಕಾರ ತಕ್ಕ ಶಾಸ್ತಿ ಮಾಡಲಿದೆ ಎಂದರು.
ಪಕ್ಷ-ಪಂಗಡ, ಜಾತಿ, ಧರ್ಮ ಮೀರಿ ಒಗ್ಗಟ್ಟಾಗಿ ಈ ಪರಿಸ್ಥಿತಿಯನ್ನು ಎದುರಿಸಿ ದೇಶದಲ್ಲಿ ಭಯೋತ್ಪಾದನೆಗೆ ಇತಿಶ್ರೀ ಹಾಡಬೇಕಿದೆ. ಇಡೀ ದೇಶ ಹಾಗೂ ಸರ್ಕಾರ ಮಂಜುನಾಥ ರಾವ್ ಅವರ ಕುಟುಂಬದ ಜೊತೆಗೆ ಇರಲಿದೆ ಎಂದರು.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ವಿಜಯ ನಗರ ಬಡಾವಣೆಯ ಮನೆ ತುಲುಪುತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾ ಲಿ ಮೂಲಕ ಬರಮಾಡಿಕೊಂಡರು.
ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೆಸಿಬಿ ಮುಂಭಾಗ ಉಗ್ರರ ಪ್ರತಿಕೃತಿ ನೇತಾಕಿ ರ್ಯಾಣಲಿ ನಡೆಸಿ, ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದರು.
ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನ ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ-ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.
ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಆಯನೂರು ಮಂಜುನಾಥ ಮೊದಲಾದವರು ಹಾಜರಿದ್ದರು.




