ಬೆಂಗಳೂರು: ಸರ್ಕಾರದ ಪ್ರಮುಖರ ವಿರುದ್ಧ ಖಾಸಗಿ ಪ್ರಕರಣ ದಾಖಲಿಸಲು ಅನುಮತಿ ನೀಡುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸರ್ಕಾರದ ವಿರುದ್ಧ ಸಂಘರ್ಷಕ್ಕೆ ಮುಂದಾಗಿರುವ ರಾಜ್ಯಪಾಲರಿಗೆ ಜೆಡ್ ಶ್ರೇಣಿಯ ಭದ್ರತೆ ನೀಡಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಗುಪ್ತಚರ ಇಲಾಖೆಯ ಇತ್ತೀಚಿನ ವರದಿಯ ಆಧಾರದಲ್ಲಿ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದ್ದು, ಕರ್ನಾಟಕದಲ್ಲಿ ಮಾತ್ರ ಗೆಹ್ಲೋಟ್ ಅವರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ಪ್ರಕರಣ ದಾಖಲಿಸಲು ಅನುಮತಿ ನೀಡಿದ ನಂತರ ರಾಜ್ಯಪಾಲರ ವಿರುದ್ಧ ಹಲವೆಡೆ ಪ್ರತಿಭಟನೆಗಳು ನಡೆದಿದ್ದವು.
ಅಲ್ಲದೆ ರಾಜ್ಯಪಾಲರು ಭಾಗವಹಿಸುವ ಸಭೆ ಸಮಾರಂಭಗಳಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹಲವು ಸಂಘಟನೆಗಳು ಬೆದರಿಕೆ ಹಾಕಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೆಲವು ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ಪಾಲ್ಗೊಂಡಿರಲಿಲ್ಲ.
ಇದಾದ ನಂತರದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಹಲವು ವಿಷಯಗಳಲ್ಲಿ ಸಂಘರ್ಷ ಮುಂದುವರೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ.




