ಬೆಂಗಳೂರು: ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ತಕರಾರು ಎತ್ತಿರುವ ರಾಜ್ಯಪಾಲ ಥಾವರಚಂದ್ ಗೆಹಲೋಟ್, ತಿದ್ದುಪಡಿ ಮಸೂದೆಗೆ ಅಂಕಿತ ಹಾಕಲು ನಿರಾಕರಿಸಿದ್ದು ಅದನ್ನು ರಾಷ್ಟ್ರಪತಿಗಳಿಗೆ ರವಾನಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಈ ತಿದ್ದುಪಡಿ ಮಸೂದೆಯಲ್ಲಿ ಸಾಂವಿಧಾನಿಕ ತೊಡಕು ಮತ್ತು ನಿರ್ಬಂಧಗಳಿರುವುದರಿಂದ ಪ್ರಸ್ತಾಪಿತ ಮಸೂದೆಗೆ ಅಂಕಿತ ಹಾಕುವ ಬದಲು, ರಾಷ್ಟ್ರಪತಿಯ ಪರಿಶೀಲನೆಗೆ ಬಿಡುವುದು ಸೂಕ್ತವೆಂದು ಭಾವಿಸಿದ್ದೇನೆ ಎಂದು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಸರ್ಕಾರಕ್ಕೆ ಪತ್ರವನ್ನು ರವಾನಿಸಿರುವ ಅವರು, ರಾಜ್ಯ ಸರ್ಕಾರ 1994 ಸೆ. 17ರ ಅಧಿಸೂಚನೆಯ ಪ್ರಕಾರ ಮುಸ್ಲಿಂ ಸಮುದಾಯವನ್ನು 2ಬಿ ಪ್ರವರ್ಗದಡಿ ಹಿಂದುಳಿದ ವರ್ಗವೆಂದು ಗುರುತಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆ. ಪ್ರವರ್ಗ 1ರಲ್ಲಿ 95 ಜಾತಿಗಳು, 2ಎಯಲ್ಲಿ 102, 2ಬಿಯಲ್ಲಿ 1, 3ಎಯಲ್ಲಿ 3 ಮತ್ತು 3ಬಿಯಲ್ಲಿ 6 ಜಾತಿಗಳಿವೆ. ಈ ಹಿಂದಿನ ರಾಜ್ಯ ಸರ್ಕಾರವು 2023ರ ಮಾರ್ಚ್ 27ರ ಆದೇಶದಲ್ಲಿ ಪ್ರವರ್ಗ 2ಬಿಗೆ ನೀಡಿದ್ದ ಶೇ 4 ಮೀಸಲಾತಿ ವಾಪಸ್ ಪಡೆದಿದೆ. ಹಾಗಿದ್ದರೂ, ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಲು ಈ ಮಸೂದೆ ತರಲಾಗಿದೆ ಎಂದಿದ್ದಾರೆ.
ಮುಸ್ಲಿಮರು ಮಾತ್ರ ಇರುವ ಪ್ರವರ್ಗ 2ಬಿಗೆ ಶೇ 4ರಷ್ಟು ಮೀಸಲಾತಿ ನೀಡಿರುವುದನ್ನು ‘ಧರ್ಮ ಆಧರಿಸಿ ಸಮುದಾಯಕ್ಕೆ ನೀಡಿದ ಮೀಸಲಾತಿ’ ಎಂದು ಅರ್ಥೈಸಬಹುದಾಗಿದೆ.
ಧರ್ಮ ಆಧಾರಿತ ಮೀಸಲಾತಿಗೆ ಸಂವಿಧಾನವು ಅವಕಾಶ ನೀಡುವುದಿಲ್ಲ. ಅಲ್ಲದೆ ಇದು ಸಂವಿಧಾನದ ವಿಧಿ 14 (ಸಮಾನತೆ) 15 (ತಾರತಮ್ಯರಹಿತ) ಮತ್ತು 16 (ಸಾರ್ವಜನಿಕ ಉದ್ಯೋಗದಲ್ಲಿ ಸಮಾನ ಅವಕಾಶ) ಎಂಬ ತತ್ವಗಳ ಉಲ್ಲಂಘನೆಯಾಗುತ್ತದೆ.
ಪ್ರವರ್ಗ 2ಬಿಗೆ ನೀಡಿರುವ ಶೇ 4ರಷ್ಟು ಮೀಸಲಾತಿ ವಿಚಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿ ಇರುವುದರಿಂದ ಪ್ರಸ್ತಾಪಿತ ಕೆಟಿಟಿಪಿ ಕಾಯ್ದೆ ತಿದ್ದುಪಡಿ ಮೂಲಕ ಮೀಸಲಾತಿ ನೀಡಲು ಹೊರಟಿರುವುದು ಕಾನೂನು ತೊಡಕುಗಳಿಗೆ ಕಾರಣ ಆಗಬಹುದು
ಹೀಗಾಗಿ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿಗಳ ಅವಗಾಹನೆಗಾಗಿ ಕಳುಹಿಸುತ್ತಿದ್ದೇನೆ ಎಂದಿದ್ದಾರೆ.




