ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಅಯೋಮಯವಾಗಿದೆ. ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಹಾಲು ಉತ್ಪಾದಕರಿಗೆ ನೀಡಬೇಕಾದ ಸಹಾಯಧನದ ಮೊತ್ತ 700 ಕೋಟಿ ರೂಪಾಯಿ ದಾಟಿದೆ ಎಂದು ಡಿಎಸ್ ಆರೋಪಿಸಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಬರಗಾಲದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರು ಇದೀಗ ಹಾಲಿನ ಸಹಾಯಧನದ ಬಾಕಿ ದೊರಕದೆ ಮತ್ತಷ್ಟು ಹೈರಾಣರಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕಾಲ ಹರಣ ಮಾಡದೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆಯಲ್ಲಿರುವ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರ ಹಾಲಿನ ಸಬ್ಸಿಡಿಯನ್ನು ಕೊಡದೆ ಹಾಲು ಉತ್ಪಾದಕರಿಗೆ ಮೋಸ ಮಾಡುತ್ತಿದೆ. 700 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವ ಸರ್ಕಾರಕ್ಕೆ ಆತ್ಮಸಾಕ್ಷಿ ಇದೆಯಾ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕೃಷಿ ಅನುದಾನಕ್ಕೆ ಶೇಕಡ 32ರಷ್ಟು ಕತ್ತರಿ ಹಾಕಲಾಯಿತು. ಹಾಲು ಉತ್ಪಾದಕರಿಗೆ ಸಹಾಯಧನ ಏಳು ರೂಪಾಯಿಗೆ ಹೆಚ್ಚಳ ಮಾಡುವುದಾಗಿ ಹೇಳಿ ಮೋಸ ಮಾಡಲಾಯಿತು ಎಂದಿದ್ದಾರೆ.



