ಬ್ರಾಹ್ಮಣ ಸಮುದಾಯ ಮಕ್ಕಳ ಶಿಕ್ಷಣ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಮಾಜದ ಮುಖ್ಯವಾಹಿನಿ ತರಲು ಯೋಜನೆ
ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025ರಲ್ಲಿ ಅಧ್ಯಕ್ಷೀಯ ಅಭ್ಯರ್ಥಿಯಾದ ಎಸ್. ರಘುನಾಥ್ ಮತ್ತು ವೇದಬ್ರಹ್ಮ ಭಾನುಪ್ರಕಾಶ್ ರವರು ನಡುವೆ ಸ್ಪರ್ಧೆ ಏರ್ಪಟ್ಟಿತ್ತು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಅಧ್ಯಕ್ಷೀಯ ಅಭ್ಯರ್ಥಿ ಎಸ್.ರಘುನಾಥ್ ರವರು 13,399 ಮತಗಳನ್ನು ಪಡೆದು ಅಭೂತಪೂರ್ವ ಗೆಲುವು ಸಾಧಿಸಿದರು. ಭಾನುಪ್ರಕಾಶ್ ಶರ್ಮರವರು 11,235 ಮತಗಳನ್ನು ಪಡೆದರು. ಎಸ್.ರಘುನಾಥ್ ರವರು 2,164 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರು.
ಗೆಲುವಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ರಘುನಾಥ್, ರಾಜ್ಯದಲ್ಲಿ 45 ಲಕ್ಷ ಬ್ರಾಹ್ಮಣರ ಜನಸಂಖ್ಯೆ ಇದೆ. ನಮ್ಮಲ್ಲಿ ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಜನಸಂಖ್ಯೆಯಲ್ಲಿ ಇದ್ದಾರೆ ಎಂದರು.
ನಮ್ಮಲ್ಲಿ ಪೌರೋಹಿತ್ಯ, ಅಡುಗೆ ಕೆಲಸ ಮಾಡುವವರು ಹಾಗೂ ಅರ್ಚಕ ವೃತ್ತಿ ಮಾಡುವವರು ಇನ್ನಿತರೆ ವೃತ್ತಿ ಮಾಡುವವರ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಸಿಗಬೇಕು ಮತ್ತು ವೃತ್ತಿ ಭಾಂದವರಿಗೆ ಆರ್ಥಿಕವಾಗಿ ಶಕ್ತಿ ತುಂಬಬೇಕು. ಅವರು ಸಹ ಎಲ್ಲರಂತೆ ಸಮಾಜದ ಮುಖ್ಯವಾಹಿನಿ ತರಬೇಕು ಎಂದು ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ವಿಪ್ರ ಹಿರಿಯ ಸಾಧಕರುಗಳಾದ ಸಿ.ವಿ.ಎಲ್.ಶಾಸ್ತ್ರಿ, ಬಿ.ಎನ್.ಸುಬ್ರಮಣ್ಯರವರ ಅಭಿಮಾನಿಗಳು ಸ್ನೇಹಿತರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಮತ್ತು ಮಾಜಿ ಅಧ್ಯಕ್ಷರಾದ ಎಂ.ಆರ್.ವಿ.ಪ್ರಸಾದರವರು, ಕಳೆದ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಿಂತಿದ್ದ ಆರ್.ಲಕ್ಷ್ಮಿಕಾಂತ್ ರವರು ಸಹ ಸಹಕಾರ ನೀಡಿದರು ಎಂದರು.
ವಿಪ್ರ ಸಮುದಾಯದ ಏಳಿಗೆಗಾಗಿ 100 ಕೋಟಿ ದೇಣಿಗೆ ಸಂಗ್ರಹ ಮಾಡಿ ದತ್ತಿ ನಿಧಿ ಸ್ಥಾಪನೆ ಮಾಡಿ, ಅದರಿಂದ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡಿ ವಿಪ್ರ ಸಮುದಾಯದ ಮಕ್ಕಳಿಗೆ ಅವಕಾಶ ನೀಡುವುದು ಹಾಗೂ ವಿಶ್ರಾಂತಿ ಭವನ ನಿರ್ಮಾಣ ಮಾಡಲಾಗುವುದು ಎಂದರು.
ಉದ್ಯೋಗ ಮೇಳ, ಸಾಮೂಹಿಕ ಉಪನಯನ ಮತ್ತು ವಧು-ವರ ಅನ್ವೇಷಣೆ ಕೇಂದ್ರ, ವಿಕಲಚೇತನರಿಗೆ ಸಹಾಯಧನ ಮತ್ತು ಸದಸ್ಯತ್ವ ಅಭಿಯಾನ ರಾಜ್ಯಾದ್ಯಂತ ಚುರುಕುಗೊಳಿಸುವುದು. ವಿಪ್ರ ಸಮುದಾಯದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ನಮ್ಮ ಜೊತೆಯಲ್ಲಿ ಉತ್ತಮ ತಂಡವಿದೆ. ಸಾಧನೆ ಮತ್ತು ಯೋಜನೆಗಳನ್ನು ವಿಪ್ರರಿಗೆ ತಿಳಿಸಿ ಮತಯಾಚನೆ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಮೇಲ್ವರ್ಗದವರಿಗೆ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಕಡ್ಡಾಯಗೊಳಿಸಲು ಹೋರಾಟ ಮಾಡಲಾಗುವುದು ಎಂದರು.
ನನ್ನ ಗೆಲುವಿಗೆ ವಿಪ್ರ ಸಮುದಾಯದ ಮುಖಂಡರು, ಕಾರ್ಯಕರ್ತರು ಸ್ನೇಹಿತರು ನಾಡಿನ ಸಮಸ್ತ ವಿಪ್ರ ಕುಲ ಭಾಂದವರಿಗೆ ಹೃತ್ವೂರ್ವಕ ಧನ್ಯವಾದಗಳು ಎಂದು ಹೇಳಿದರು.
ರಾಜ್ಯದಲ್ಲಿ 66 ಸಾವಿರ ಮತದಾರರು, ಬೆಂಗಳೂರು ನಗರ ಪ್ರದೇಶದಲ್ಲಿ 34 ಸಾವಿರ ಮತದಾರರು ಇದ್ದಾರೆ. ಬೆಳಗ್ಗೆ 8ರಿಂದ 4ಗಂಟೆಗೆ ವರಗೆ ಮತದಾನ ನಂತರ ಮತ ಎಣಿಕೆ ಕಾರ್ಯ ಜರುಗಿತು.
ಬೆಂಗಳೂರು ನಗರ ಪ್ರದೇಶದಲ್ಲಿ 8 ಜಿಲ್ಲಾ ಪ್ರತಿನಿಧಿ ಸ್ಥಾನಗಳಿಗೂ ಚುನಾವಣೆ ನಡೆಯುತ್ತಿದೆ. ದಕ್ಷಿಣ ಜಿಲ್ಲಾ ಪ್ರತಿನಿಧಿ 4 ಸ್ಥಾನ ಹಾಗೂ ಕೇಂದ್ರ ಜಿಲ್ಲಾ ಪ್ರತಿನಿಧಿ 2 ಸ್ಥಾನ, ಉತ್ತರ ಜಿಲ್ಲಾ ಪ್ರತಿನಿಧಿ 2ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
ಮತದಾನ ಕೇಂದ್ರಗಳು ಮೂರು ಕಡೆಗಳಲ್ಲಿ ಸ್ಥಾಪಿಸಲಾಗಿತ್ತು. ರಾಯರಾಯ ಕಲ್ಯಾಣ ಮಂಟಪ, ಚಂದ್ರಶೇಖರ ಭಾರತಿ ಕಲ್ಯಾಣ ಮಂಟಪ ಮತ್ತು ಎ.ಪಿ.ಎಸ್.ಕಾಲೇಜು ಮತ್ತು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ 1000ಕ್ಕೂ ಮತ ಇರುವ ಜಿಲ್ಲೆಗಳಲ್ಲಿ ಮತಗಟ್ಟೆ ಸ್ಥಾಪನೆ ಆಯಾ ಜಿಲ್ಲೆಯವರು ಅಲ್ಲಿಯೆ ಮತ ಮಾಡುವಂತೆ ವ್ಯವಸ್ಥೆ ಮಾಡಲಾಗಿತ್ತು.









