ಬೆಂಗಳೂರು: ಬಿಜೆಪಿಯವರಿಗೆ ನೈಜ ಕಾಳಜಿಯಿಲ್ಲ. ಅವರು ಹೋರಾಟ ನಡೆಸಬೇಕಾಗಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಮಾತಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಾಗಿದೆ. ತೈಲ ಬೆಲೆ ಏರಿಕೆಯಿಂದ ಕೋಟ್ಯಾಧಿಪತಿಗಳಿಗೆ ಅನುಕೂಲವಾಗಿದೆ. ಬಡವರಿಗೆ ತೊಂದರೆಯಾಗಿದೆ. ಮೊದಲು ಪೆಟ್ರೋಲ್, ಡೀಸೆಲ್ ಮೇಲಿನ ದರ ಕಡಿಮೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಸವಾಲೆಸೆದರು.
ಈ ಎಲ್ಲ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಸಿದೆ. ಈ ಮೂಲಕ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಮುಖಭಂಗವಾದಂತಾಗಿದೆ.




