ಗುಂಪು ಹತ್ಯೆ ಪ್ರಕರಣಕ್ಕೆ ಸರ್ಕಾರವೇ ಹೊಣೆ
ಮೃತ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ
ಗೃಹ ಮಂತ್ರಿ ರಾಜೀನಾಮೆಗೆ ನೀಡಲಿ: ಅಪ್ಸರ್ ಕೊಡ್ಲಿಪೇಟೆ ಆಗ್ರಹ
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗುಂಪು ಹತ್ಯೆಯನ್ನು ಖಂಡಿಸಿ ಹಾಗೂ ಬಾಲಿಶ ಹೇಳಿಕೆ ನೀಡಿರುವ ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಭಾಗವಹಿಸಿ ಮಾತನಾಡಿ, ಈ ಗುಂಪು ಹತ್ಯೆಯ ಹಿಂದಿರುವ ಷಡ್ಯಂತ್ರವನ್ನು ಬಯಲಿಗೆಳೆಯಬೇಕು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕು, ಮೃತ ಅಶ್ರಫ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರವನ್ನು ನೀಡಬೇಕು ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿದ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ SDPI ಉಡುಪಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಂ ಆದಿ ಉಡುಪಿ ಮಾತನಾಡಿದರು.
ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಝಾಕ್ YS ಹಾಗೂ ಜಿಲ್ಲಾ ನಾಯಕರು ಹಾಜರಿದ್ದರು.
The govt is responsible for the mobile lynching case




