ಪತ್ನಿ ಬೆರಳನ್ನೇ ಕಚ್ಚಿ ತಿಂದ ಪತಿ!

3 years ago

#husband #bit #wife #finger #ate

ಬೆಂಗಳೂರು: ಕೌಟುಂಬಿಕ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದಾಗ ರೊಚ್ಚಿಗೆದ್ದ ಪತಿಯೊಬ್ಬ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ತಿಂದಿರುವ ಘಟನೆ ಕೋಣನಕುಂಟೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕೈ ಬೆರಳು ಕಳೆದುಕೊಂಡ ಪುಷ್ಪಾ (40) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಪುಷ್ಪಾ 23 ವರ್ಷಗಳ ಹಿಂದೆ ವಿಜಯ್ಕುಮಾರ್ ನನ್ನು ಮದುವೆಯಾಗಿದ್ದು, ಕೆಲ ವರ್ಷಗಳಿಂದ ವಿಜಯ್ಕುಮಾರ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ಆರೋಪಿಸಿದ್ದಾರೆ.

ವಿವಾಹದ ಬಳಿಕ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದು, ದಂಪತಿಗೆ ಒಬ್ಬ ಮಗನೂ ಇದ್ದಾನೆ. ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ಬೇರೆಡೆ ಮನೆ ಮಾಡಿ ಪತಿಯಿಂದ ದೂರವಿದ್ದು ಕಳೆದ ಜುಲೈ 28ರಂದು ವಿಜಯ್ಕುಮಾರ್ ಪತ್ನಿ ಇದ್ದ ಮನೆಗೆ ತೆರಳಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದು, ನಿನ್ನನ್ನು ಕೂಡಾ ಕೊಂದು ಇದೇ ರೀತಿ ತಿನ್ನುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ರೌಡಿಶೀಟರ್ಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಹೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply