ಬೆಂಗಳೂರು: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದರು.
ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ ಎಂದರು.




