ಸೋಲಿಗೆ ಕಾರಣಗಳನ್ನು ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ: ವಿಜಯೇಂದ್ರ 

1 year ago

ಬೆಂಗಳೂರು: ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಮಿತ್ರಪಕ್ಷ ಜೆಡಿಎಸ್ ಹಾಗೂ ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿಗೆ ಕಾರಣಗಳ ಬಗ್ಗೆ ಎರಡೂ ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಸೋಲಿಗೆ ಕಾರಣ ಹುಡುಕುತ್ತೇವೆ ಎಂದರು.

ಸಂಡೂರಿನಲ್ಲಿ ಮೊದಲ ಬಾರಿಗೆ ಬಿಜೆಪಿ ಸುಮಾರು 80 ಸಾವಿರ ಮತ ಪಡೆದಿದೆ. ಎಂಟತ್ತು ಸಾವಿರ ಅಂತರದಲ್ಲಿ ಗೆಲ್ಲುವ ವಿಶ್ವಾಸವಿತ್ತು. ಸಂಡೂರು ಫಲಿತಾಂಶ ಹಿನ್ನಡೆ ಅಂತ ನಾನು ಭಾವಿಸುವುದಿಲ್ಲ. ಹಿನ್ನೆಡೆಗೆ ಕಾರಣ ಹುಡುಕಿ ಸರಿಪಡಿಸಿಕೊಳ್ಳುತ್ತೇವೆ ಎಂದರು.

ಶಿಗ್ಗಾಂವಿ ಕ್ಷೇತ್ರ ಮಾತ್ರ ನಮಗೆ ಆಘಾತ ತಂದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೆಲಸ ಮಾಡಿದ್ದರು. ಅಭಿವೃದ್ಧಿ ಕೆಲಸಗಳನ್ನೂ ಮಾಡಿದ್ದರು. ಸೋಲಿನ ಬಗ್ಗೆ ಕಾರಣ ಹುಡುಕುತ್ತೇವೆ ಎಂದರು.

Leave a Reply