ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲ ಅವರಿಗೆ ಕಿಸಾನ್ ಕಾಂಗ್ರೆಸ್ ನಿಂದ ಗೆದ್ದ ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಒತ್ತಾಯಿಸಿದ್ದಾರೆ.
ಹರಪನಹಳ್ಳಿ ಸ್ವತಂತ್ರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್ ಗೆ ಕಿಸಾನ್ ಕಾಂಗ್ರೆಸ್ ವತಿಯಿಂದ ಅಭಿನಂದನೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗು ಎ. ಐ. ಸಿ. ಸಿ ಉಸ್ತುವಾರಿ ಸುರ್ಜೆವಾಲಾ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲಾಯಿತು.
ಈ ಕುರಿತು ಪ್ರತಿಕ್ರಿಯಿಸಿದ ಸಚಿನ್ ಮೀಗಾ, ಲತಾ ಮಲ್ಲಿಕಾರ್ಜುನ್ ಅವರು ರಾಷ್ಟ್ರೀಯ ಕಿಸಾನ್ ಕಾಂಗ್ರೆಸ್ ಪದಾಧಿಕಾರಿ ಹಿನ್ನೆಲೆಯಲ್ಲಿ ಹರಪನಹಳ್ಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಕೇಳಿದ್ದು ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ದಿಸಿ 14 ಸಾವಿರ ಮತಗಳಿಂದ ಜಯಗಳಿಸಿದ್ದಾರೆ ಎಂದರು.
ಕಿಸಾನ್ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಅಧ್ಯಕ್ಷ ಬಸವರಾಜ್ ವಿ.ಶಿವಗಂಗಾ ಚನ್ನಗಿರಿ ಇಂದ 18 ಸಾವಿರ ಮತಗಳಿಂದ ಜಯಗಳಿಸಿದ್ದು, ಕುಡಚಿಯಿದ ರಾಜ್ಯ ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷ ಮಹೇಂದ್ರ ತಮ್ಮಣ್ಣವರ್ 25 ಸಾವಿರ ಮತಗಳಿಂದ ಜಯಗಳಿಸಿದ್ದು, ತೇರದಾಳ ಅಭ್ಯರ್ಥಿ ರಾಜ್ಯ ಕಿಸಾನ್ ಕಾಂಗ್ರೆಸ್ ಸಂಚಾಲಕ ಸಿದ್ದು ಕೊಣ್ಣೂರ 10 ಸಾವಿರ ಮತಗಳಿಂದ ಪರಾಜಿತವಾಗಿದ್ದರೆ, ಇನ್ನು ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘ ಕ್ಕೆ ಕಾಂಗ್ರೆಸ್ ಬೆಂಬಲ ಹಿನ್ನೆಲೆಯಲ್ಲಿ ರೈತನಾಯಕ ದರ್ಶನ್ ಪುಟ್ಟಣಯ ಗೆದ್ದಿದ್ದಾರೆ ಎಂದು ಹೇಳಿದರು.
ನರಗುಂದ, ರಾಯಬಾಗ, ಕುಮಟಾ ಮತ್ತು ದೇವರಹಿಪ್ಪರಗಿ ಕ್ಷೇತ್ರಗಳಲ್ಲಿ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ಈ ಬಾರಿ ಟಿಕೆಟ್ ವಂಚಿತವಾಗಿದ್ದು ಇವರುಗಳನ್ನು ಗುರುತಿಸಿ ಹಾಗು ಕಿಸಾನ್ ಕಾಂಗ್ರೆಸ್ ಸಂಘಟನೆ ಮಾಡಿರುವ ರಾಜ್ಯ ಹಾಗು ಜಿಲ್ಲಾ ನಾಯಕರುಗಳಿಗೆ ಸೂಕ್ತ ಸ್ಥಾನಮಾನಗಳನ್ನು ನೀಡುವಂತೆ ಒತ್ತಾಯಿಸಿದರು.
ಕೃಷಿ ಪ್ರಧಾನ ರಾಜ್ಯದಲ್ಲಿ ರೈತ ಪರ ಹೋರಾಟ ನೆಡೆಸಿ ಪಕ್ಷವನ್ನು ಸಂಘಟಿಸಿ ಕಿಸಾನ್ ಕಾಂಗ್ರೆಸ್ ನಲ್ಲಿ ಗೆದ್ದ ಶಾಸಕರುಗಳಿಗೆ ಮಂತ್ರಿ ಸ್ತನ ನೀಡುವಂತೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಒತ್ತಾಯಿಸುತ್ತದೆ



