ಬೆಂಗಳೂರು: ಅವೈಜ್ಞಾನಿಕವಾಗಿ ಪೆಟ್ರೋಲ್, ಡೀಸೆಲ್ ಮಾರಾಟ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮಾಡುವುದಕ್ಕಿಂತ, ರಾಜ್ಯದ ಜನತೆ ದಂಗೆ ಏಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದಲೇ ದುಡ್ಡು ವಸೂಲಿ ಮಾಡಿ, ಜನರಿಗೆ ಹಣ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಜನ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದರು.
ಕಾಲಭೈರವನ ದರ್ಶನ ಮಾಡಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಒಕ್ಕಲಿಗ ಸಮಾಜ ಮತ್ತು ರಾಜ್ಯಕ್ಕೆ ಗೌರವ ತರುವಂತೆ ಕೆಲಸ ಮಾಡಲು ಶಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.




