ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಸಮಸ್ಯೆ ಇದೇ ತಿಂಗಳ 20ರೊಳಗೆ ಬಗೆಹರಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಾಳೆ ಎಲ್ಲಾ ಮಾಹಿತಿಯನ್ನು ನೀಡಲಿದ್ದೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಫೆ.20ರಂದು ಯತ್ನಾಳ್ ತಂಡದಿಂದ ಮತ್ತೆ ಸಭೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರಿದ್ದಾರೆ. ಸಭೆ ಕರೆದು ಪಕ್ಷ ಬಲಪಡಿಸುವ ಬಗ್ಗೆ ಚರ್ಚೆ ಮಾಡುತ್ತಾರೆ. ಅದಕ್ಕೆ ನಾನು ಯಾಕೆ ಬೇಡ ಎನ್ನಲಿ ಎಂದು ಪ್ರಶ್ನಿಸಿದರು.
ಭಿನ್ನಮತೀಯರ ಸಭೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಯಾರೇನೇ ಮಾಡಿದರೂ ಪಕ್ಷಕ್ಕೆ ಪೂರಕವಾಗಿ ಮಾಡುತ್ತಾರೆ ಎಂಬುದು ನನ್ನ ಅಭಿಲಾಷೆ ಎಂದರು.




