ಧಾರವಾಡ: ಸಂಗೀತ, ಸಾಹಿತ್ಯಕ್ಕೆ ಹೆಸರಾದ ಧಾರವಾಡದಲ್ಲಿ ರಂಗಾಯಣವು ನಾಟಕಗಳ ಮೂಲಕ ಮನರಂಜನೆಯೊಂದಿಗೆ ಜೀವನದ ಕುರಿತು ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಸಿ.ಡಿ ಗೀತಾ ಹೇಳಿದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ರಂಗಾಯಣವು ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ರಂಗ ತಂಡಗಳ ಸಹಯೋಗದಲ್ಲಿ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿದ್ಧಗೊಂಡ ಹಾಗೂ ಸ್ಥಳೀಯ ತಂಡಗಳಿಂದ ಹಮ್ಮಿಕೊಂಡಿದ್ದ “ರಂಗಾಯಣ ನಾಟಕೋತ್ಸವ”ವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ದಿನನಿತ್ಯದ ಜಂಜಾಟದಲ್ಲಿ ಕಳೆದು ಹೋಗುತ್ತಿರುವ ಜನರಿಗೆ ವಿನೂತನ, ವಿಭಿನ್ನ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಮನರಂಜನೆಯನ್ನು ನೀಡುತ್ತಿದೆ. ನಾಟಕಗಳು ಮನರಂಜನೆಯೊಂದಿಗೆ ಆದಾಯದ ಮೂಲವು ಆಗಿದೆ. ಸಕ್ರಿಯವಾಗಿ ಜೀವನ ನಡೆಸಲು ನಾಟಕಗಳು ಪ್ರೇರಣೆಯಾಗಿವೆ. ಉತ್ತಮ ಸಂದೇಶಗಳಿರುವ ನಾಟಕಗಳನ್ನು ಪ್ರದರ್ಶನ ಮಾಡುವ ಕಾರ್ಯವನ್ನು ರಂಗಾಯಣ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ರಂಗ ನಿರ್ದೇಶಕ ಹುಲುಗಪ್ಪ ಕಟ್ಟಿಮನಿ ಮಾತನಾಡಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿರುವ ವ್ಯಕ್ತಿತ್ವವನ್ನು ಹೊಂದಿದ ಬಿ.ವಿ ಕಾರಂತರ ಕನಸಿನ ಕೂಸಿನ ಧಾರವಾಡ ರಂಗಾಯಣವು ಇಂದು ಹಲವಾರು ಸೃಜನಾತ್ಮಕ ನಿರ್ದೇಶಕರು, ಕಲಾವಿದರನ್ನು ರಂಗಭೂಮಿಗೆ ಪರಿಚಯಿಸಿದೆ. ಇದೇ ರೀತಿ ರಂಗಾಯಣವು ಹಲವಾರು ಯೋಜನೆಗಳ ಮೂಲಕ ರಂಗಭೂಮಿಯ ಬೆಳವಣಿಗೆಗೆ ಸಹಕಾರಿಯಾಗಲಿ ಎಂದರು.
ರಂಗಾಯಣ ನಿರ್ದೇಶಕರಾದ ಡಾ.ರಾಜು ತಾಳಿಕೋಟಿ ಮಾತನಾಡಿ, ನಾಟಕಗಳನ್ನು ಪ್ರಸ್ತುತಪಡಿಸುವ ಮೂಲಕ ಜನರಿಗೆ ಮಾಹಿತಿಯ ಜೊತೆಗೆ ಮನರಂಜನೆಯನ್ನು ನೀಡುವ ಕಾರ್ಯವನ್ನು ರಂಗಾಯಣ ಮಾಡುತ್ತಿದೆ. ನಾಟಕಗಳನ್ನು ನೋಡಲು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದರು.
ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಸ್ವಾಗತಿಸಿದರು. ನಂತರ “ಅಂಗುಲಿಮಾಲ” ದೊಡ್ಡಾಟ ಪ್ರಸಂಗವನ್ನು ಹುಬ್ಬಳ್ಳಿ ಜನಪದ ಕಲಾಬಳಗ ಟ್ರಸ್ಟ್(ರಿ) ಅವರು ಪ್ರಸ್ತುತ ಪಡಿಸಿದರು.
ಇಂದು “ಹೆತ್ತವಳ ಹಾಲು ವಿಷವಾಯಿತು” ನಾಟಕವನ್ನು ಹುಬ್ಬಳ್ಳಿ ಕನ್ನಡ ಕಲಾ ಸೇವಾ ಸಂಘ(ರಿ) ತಂಡ ಪ್ರಸ್ತುತಪಡಿಸಲಿದೆ.









