ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

3 months ago

ಬೆಂಗಳೂರು: ಕಾಂಗ್ರೆಸ್ ನಾಯಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ವಿಚಾರಣೆಗೆ ಕರೆತಂದ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿದ ಆರೋಪದ ಕುರಿತಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಬಿಜೆಪಿಯ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ಅವರನ್ನು ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದಿರುವ ವಿಡಿಯೋಗಳ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಹಿಳಾ ಆಯೋಗದ ಪ್ರಕಟಣೆ ತಿಳಿಸಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಅಧ್ಯಕ್ಷ ವಿಜಯ ರಾಹತ್ಕರ್ ಅವರು, ಇದೊಂದು ಆಘಾತಕಾರಿ ವಿದ್ಯಮಾನವಾಗಿದೆ ಇಂತಹ ಘಟನೆಗಳು ಮಹಿಳೆಯ ಗಣತೆ ವೈಯಕ್ತಿಕ ಸ್ವಾತಂತ್ರದ ಹರಣ ಹಾಗೂ ಲಿಂಗಧಾರಿತ ಹಿಂಸೆಯ ವಿರುದ್ಧ ನೀಡಲಾದ ರಕ್ಷಣೆಯ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಈ ಘಟನೆಯ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸದಿದ್ದರೆ ಕೂಡಲೇ ದಾಖಲಿಸಬೇಕು ವಿಡಿಯೋ ಸಾಕ್ಷಿಗಳ ಪರಿಶೀಲನೆ ಸೇರಿದಂತೆ ಎಲ್ಲ ಕಾನೂನು ಕ್ರಮಗಳನ್ನು ಕೈಗೊಂಡು ಕೋರಿದ ರೀತಿಯಲ್ಲಿ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಲ್ಲದೆ ಈ ಬಗ್ಗೆ ಐದು ದಿನದಲ್ಲಿ ಆಯೋಗಕ್ಕೆ ಸಮಗ್ರ ವರದಿ ನೀಡಬೇಕು ಎಂದು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಿಬಿಐ ತನಿಖೆ ಅನಗತ್ಯ: ಇನ್ನು ಘಟನೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಾಜ್ಯ ಬಿಜೆಪಿ ನಾಯಕರು ಮಾಡಿರುವ ಆಗ್ರಹವನ್ನು ತಳ್ಳಿ ಹಾಕಿರುವ ಗೃಹ ಮಂತ್ರಿ ಜಿ ಪರಮೇಶ್ವರ್ ರಾಜ ಪೊಲೀಸರು ಈಗಾಗಲೇ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಆ ಮಹಿಳೆಯೇ ತಮ್ಮ ಬಟ್ಟೆಯನ್ನು ಹರಿದುಕೊಂಡು ಗೊಂದಲ ಮಾಡಿದ್ದಾರೆ ಎಂದು ಹೇಳಿದ್ದಾರೆ ಹೀಗಾಗಿ ಎಲ್ಲದರ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Leave a Reply