ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಾಗರಿಕರಲ್ಲಿ ಕೋರಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಸಾರ್ವಜನಿಕರಿಂದ ಕೆಲವು ಅನಾಮಧೇಯ ವ್ಯಕ್ತಿಗಳು ಹಣ ವಸೂಲು ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿದೆ. ಈ ಕುರಿತು ಪ್ರಸ್ತುತ ಸಾಕ್ಷ್ಯಾಧಾರಗಳು ಸಹ ಲಭ್ಯವಾಗಿವೆ. ಈ ಕುರಿತು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸಾಕ್ಷ್ಯಾಧಾರ ಸಮೇತ ದೂರು ನೀಡಲಾಗಿದೆ ಎಂದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಪ್ರಸ್ತುತ ಯಾವುದೇ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲಿರುವುದಿಲ್ಲ. ಹಾಗೇನಾದರೂ ನೇಮಕಾತಿ ಇದ್ದಲ್ಲಿ ಸಕ್ಷಮ ಪ್ರಾಧಿಕಾರದ ಮೂಲಕವೇ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ನೇಮಕಾತಿ ಆಮಿಷಕ್ಕೆ ಒಳಗಾಗದೇ, ಯಾವುದೇ ಮಧ್ಯವರ್ತಿ ತಮ್ಮನ್ನು ನೇಮಕಾತಿ ಕುರಿತು ಸಂಪರ್ಕಿಸಿದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಬೇಕು ಎಂದು ಆಕಾಂಕ್ಷಿಗಳಿಗೆ ಮನವಿ ಮಾಡಿದ್ದಾರೆ.



