ಮಂಗಳೂರು: ಸಮಾಜದ ಅಭಿವೃದ್ಧಿಯಲ್ಲಿ ಕಾರ್ಮಿಕ ವರ್ಗದ ಪಾತ್ರವೇ ಪ್ರಧಾನವಾದುದ್ದು ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಅಭಿಪ್ರಾಯಪಟ್ಟರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಗರದಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಕಾರ್ಮಿಕ ವರ್ಗದ ಪ್ರಶ್ನೆಗಳನ್ನು ಪ್ರಧಾನ ಚರ್ಚೆಗೆ ಒಳಪಡಿಸುವ ಉದ್ದೇಶದಿಂದ CITU ಡಿಸೆಂಬರ್ 17, 18, 19ರಂದು ಮೂರು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. CITU ನೇತೃತ್ವದಲ್ಲಿ ಜರುಗಿದ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕ ವರ್ಗದ ಉತ್ತಮ ಬದುಕಿಗಾಗಿ ಅವಿಶ್ರಾಂತವಾಗಿ ಶ್ರಮಿಸಬೇಕಾದ ಆಳುವ ವರ್ಗಗಳು ನಿತ್ಯ ನಿರಂತರವಾಗಿ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಕಾಪಾಡಲು ಹಾತೊರೆಯುತ್ತಿವೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಕಾರ್ಮಿಕ ವರ್ಗಕ್ಕೆ ದ್ರೋಹ ಎಸಗಿದ ಯಾವುದೇ ಸರಕಾರಗಳು ಇವತ್ತಿನವರೆಗೆ ಉಳಿದಿಲ್ಲ, ಮಣ್ಣು ಮುಕ್ಕಿದೆ ಎಂದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ CITU ಜಿಲ್ಲಾ ಉಪಾಧ್ಯಕ್ಷ ಸುಕುಮಾರ್ ತೊಕ್ಕೋಟ್ಟು, ದೇಶದ ಕಾರ್ಮಿಕ ವರ್ಗ ದೀರೋದ್ಧಾತ್ತ ಹೋರಾಟದ ಮೂಲಕ ಗಳಿಸಿದ ಕಾನೂನುಗಳನ್ನು ಕೇಂದ್ರದ ನರೇಂದ್ರ ಮೋದಿ ಸರಕಾರ ನಾಶ ಮಾಡಿ ಸಂಹಿತೆಗಳನ್ನಾಗಿ ಮಾಡಲು ಹೊರಟಿರುವುದು ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸುವ ಸೂಚಕವಾಗಿದೆ ಎಂದರು.
ಸಂಸತ್ತಿನೊಳಗಡೆ ರಚನೆಗೊಂಡಿರುವ ಲೇಬರ್ ಸ್ಟಾಂಡಿಂಗ್ ಕಮಿಟಿಯ ಅಧ್ಯಕ್ಷರಾಗಿ ಕಾರ್ಮಿಕ ವಿರೋಧಿಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಆಯ್ಕೆಯಾಗಿರುವುದರಿಂದ ಕಾರ್ಮಿಕ ವರ್ಗಕ್ಕೆ ನ್ಯಾಯ ಸಿಗುವುದೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ನಾಯಕ ಯೋಗೀಶ್ ಜಪ್ಪಿನಮೊಗರು, ಕಾರ್ಮಿಕ ವರ್ಗದ ಪ್ರಶ್ನೆಗಳನ್ನು ಮುಂಚೂಣಿಗೆ ತರುತ್ತಾ, ಅಸಂಘಟಿತ ಕ್ಷೇತ್ರದ ಅಸಂಖ್ಯಾತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಈ ಕೂಡಲೇ ಜಾರಿಗೊಳಿಸಬೇಕು, ಗುತ್ತಿಗೆ ಕಾರ್ಮಿಕರ ಸಂಕಷ್ಟಗಳ ಬಗ್ಗೆ ಸರಕಾರ ಗಮನ ಹರಿಸಬೇಕು, ಮಹಿಳಾ ಕಾರ್ಮಿಕರ ಬವಣೆಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.
ಸಭೆಯನ್ನುದ್ದೇಶಿಸಿ CITU ಜಿಲ್ಲಾ ನಾಯಕ ವಸಂತ ಆಚಾರಿ, ಬಿ ಎಂ ಭಟ್, ಜಯಂತಿ ಶೆಟ್ಟಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರತಿಭಟನೆಯಲ್ಲಿ ರೈತ ಸಂಘಟನೆಯ ನಾಯಕ ಕೃಷ್ಣಪ್ಪ ಸಾಲ್ಯಾನ್, ಸದಾಶಿವದಾಸ್, ಯುವಜನ ಮುಖಂಡ ಜಗದೀಶ್ ಬಜಾಲ್ ಭಾಗವಹಿಸಿದ್ದರು. ಹೋರಾಟದ ನೇತೃತ್ವವನ್ನು CITU ಜಿಲ್ಲಾ ನಾಯಕರಾದ ರಾಧಾ ಮೂಡಬಿದ್ರೆ, ಭವಾನಿ ವಾಮಂಜೂರು, ರೋಹಿದಾಸ್, ಸುಂದರ ಕುಂಪಲ, ನೋಣಯ್ಯ ಗೌಡ, ಯಶೋಧ ಮಳಲಿ, ಲಕ್ಷ್ಮಿ, ಗಿರಿಜಾ ಮೂಡಬಿದ್ರೆ, ಲೋಲಾಕ್ಷಿ, ನಾಗೇಶ್ ಕೋಟ್ಯಾನ್, ಭಾರತಿ ಬೋಳಾರ, ಜಯಲಕ್ಷ್ಮಿ, ದಿನೇಶ್ ಶೆಟ್ಟಿ, ಮುಝಾಫರ್, ಸಂತೋಷ್ ಆರ್ ಎಸ್, ವಿಜಯ, ಚಂದ್ರಹಾಸ, ರಫೀಕ್ ಹರೇಕಳ, ಕೃಷ್ಣಪ್ಪ ಮೂಡಬಿದ್ರೆ, ಸೀತಾರಾಮ ಶೆಟ್ಟಿ, ಜಯಂತ ನಾಯಕ್,ವಿಲಾಸಿನಿ,ಗಿರಿಜಾ,ಪುಷ್ಪಾ ಮುಂತಾದವರು ವಹಿಸಿದ್ದರು.
ಬಳಿಕ CITUನ ಉನ್ನತ ಮಟ್ಟದ ನಿಯೋಗ ಮುಖ್ಯಮಂತ್ರಿಗಳಿಗೆ ದ.ಕ. ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಅರ್ಪಿಸಿತು.




