ಬೆಂಗಳೂರು: ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 519 ಮೀಟರ್ ನಿಂದ 524.256 ವರೆಗೆ ಎತ್ತರಿಸಲು ಕಾನೂನಾತ್ಮಕವಾಗಿ ಯಾವುದೇ ತೊಡಕುಗಳು ಇಲ್ಲದೇ ಇರುವುದರಿಂದ ತ್ವರಿತವಾಗಿ ಅಣೆಕಟ್ಟೆ ಎತ್ತರ ಹೆಚ್ಚಳ ಮಾಡಬೇಕೆಂದು ಉತ್ತರ ಕರ್ನಾಟಕದ ಸಚಿವರು ಒತ್ತಾಯಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕೃಷ್ಣಾ ನ್ಯಾಯಾಧಿಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯ ವಿವರಗಳನ್ನು ಸುದ್ದಿಗಾರರಿಗೆ ನೀಡಿದ ಕಾನೂನು ಸಚಿವ ಎಚ್.ಕೆ ಪಾಟೀಲ್, ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು ಹೆಚ್ಚಿಸಲು ಯಾವುದೇ ಕಾನೂನಿನ ತೊಡಕುಗಳಿಲ್ಲ ಎನ್ನುವುದು ಕಾನೂನು ತಜ್ಞರ ಅಭಿಪ್ರಾಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಗೇಟ್ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಮಂತ್ರಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು ಎಂದರು.
ಇದರ ಜೊತೆಗೆ ಕೃಷ್ಣ ಜಲವಿವಾದ ನ್ಯಾಯಾಧಿಕರಣದ ಎರಡನೇ ಐತೀರ್ಪು ಇಲ್ಲಿಯವರೆಗೆ ಗೆಜೆಟ್ ನಲ್ಲಿ ಪ್ರಕಟಗೊಂಡಿಲ್ಲ. ಹೀಗಾಗಿ ಆಯೋಗದ ಐತೀರ್ಪನ್ನು ಸಹ ಗೆಜೆಟ್ ಪ್ರಕಟಣೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು ಎಂದರು.
ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2ರ ಐತೀರ್ಪು ಪ್ರಕಟವಾಗಿ 15 ವರ್ಷಗಳು ಗತಿಸಿವೆ. ಐತೀರ್ಪಿನ ಅವಧಿ 40 ವರ್ಷದ್ದಾಗಿದೆ. ಹೀಗೆಯೇ ಇನ್ನೈದು ವರ್ಷ ಕಳೆದರೆ ಐತೀರ್ಪು ಅನುಷ್ಠಾನದ ಅರ್ಧ ಅವಧಿ ಪೂರ್ಣಗೊಳ್ಳುತ್ತದೆ ಎಂಬ ಆತಂಕವನ್ನು ಸಭೆಯಲ್ಲಿದ್ದ ಬಹುತೇಕ ಎಲ್ಲ ಸಚಿವರು ವ್ಯಕ್ತಪಡಿಸಿದರು ಎಂದರು.
ಐ ತೀರ್ಪು ಗೆಜೆಟ್ಟಿನಲ್ಲಿ ಪ್ರಕಟಗೊಳ್ಳದ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರ ಹೊಲಗಳಿಗೆ ಹರಿಯಬೇಕಾದ ನೀರು ಸಮುದ್ರಕ್ಕೆ ಹರಿದು ವ್ಯರ್ಥವಾಗುತ್ತಿದೆ ಎಂಬ ಅಂಶವನ್ನು ಕೇಂದ್ರ ಸಚಿವರ ಸಭೆಗೆ ಮನದಟ್ಟು ಮಾಡಬೇಕೆನ್ನುವ ತೀರ್ಮಾನ ಕೈಗೊಳ್ಳಲಾಯಿತು ಎಂದರು.
16 ಸಾವಿರ ಕೋಟಿ ರೂಪಾಯಿಯ ಬಂಡವಾಳ ಹೂಡಿ ಕೃಷ್ಣಾ ಮೇಲ್ದಂಡೆ ಯೋಜನೆ-3 ಅಡಿಯಲ್ಲಿ ಕಾಲುವೆ ಜಾಲ ನಿರ್ಮಾಣ ಮಾಡಲಾಗಿದೆ. ಆದರೆ, ಈ ಕಾಲುವೆಯ ಜಾಲ ವ್ಯರ್ಥವಾಗುತ್ತಿದೆ ಎಂದು ಕರ್ನಾಟಕದ ನ್ಯಾಯಯುತ ಹಕ್ಕಿಗೆ ಕೇಂದ್ರ ಸರ್ಕಾರ ಕೊಡಲಿಪೆಟ್ಟು ಹಾಕಿ ರಾಜ್ಯದ ಹಕ್ಕನ್ನು ನಿರಾಕರಿಸಿ ಕೆಳದಂಡೆ ರಾಜ್ಯಗಳಾದ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸುತ್ತಿದೆ ಎಂದರು.




