ಬೆಂಗಳೂರು: ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನಾರಚನೆ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಗೊಂದಲಗಳಿಗೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣಗಳು ಕಾಣುತ್ತಿಲ್ಲ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಗೊಂದಲಕ್ಕೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತೆರೆ ಎಳೆಯಲಿದ್ದಾರೆ ಎಂಬ ನಿರೀಕ್ಷೆಯೊಂದಿಗೆ ಅವರನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿದರಾದರೂ ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ. ಬದಲಿಗೆ ಫೆಬ್ರವರಿ 13ರಂದು ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಲಾಗುತ್ತಿರುವ ಸಾಧನ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
ತಮಿಳುನಾಡಿನಲ್ಲಿನ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರ ಜೊತೆ ಕೆಲ ಹೊತ್ತು ಮಾತುಕತೆ ನಡೆಸಿದರು. ಬಳಿಕ ರಸ್ತೆ ಮಾರ್ಗದಲ್ಲಿ ಅವರು ತಮಿಳುನಾಡಿಗೆ ತೆರಳಿದರು.
ಈ ವೇಳೆ ಸಿದ್ದರಾಮಯ್ಯ ಹಾವೇರಿಯಲ್ಲಿ ತಾವು ಏರ್ಪಡಿಸಲು ಉದ್ದೇಶಿಸಿರುವ ಸಾಧನಾ ಸಮಾವೇಶದ ಕುರಿತಾಗಿ ಮಾಹಿತಿ ನೀಡಿದರೆ, ಡಿ ಕೆ ಶಿವಕುಮಾರ್ ಅವರು ಮನೆರೇಗ ರದ್ದುಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪಕ್ಷ ಆಯೋಜಿಸಿರುವ ಪ್ರತಿಭಟನೆ ಮತ್ತು ಜನಾಂದೋಲನ ಕಾರ್ಯಕ್ರಮಕ್ಕೆ ಮಾಹಿತಿ ನೀಡಿದ್ದಾರೆ.
ಈ ಎರಡು ವಿಷಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಹುಲ್ ಗಾಂಧಿ ಅವರು ಇಬ್ಬರೂ ನಾಯಕರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಹಾವೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುತ್ತೇನೆ ಎಂದು ಹೇಳಿರುವ ಅವರು ಮಾಸಾಂತ್ಯದಲ್ಲಿ ದೆಹಲಿಗೆ ಬರುವಂತೆ ಸಲಹೆ ಮಾಡಿರುವುದಾಗಿ ಗೊತ್ತಾಗಿದೆ.
ಈ ಭೇಟಿ ಸಮಯದಲ್ಲಿ ಉಭಯ ನಾಯಕರು ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ಮಾಡಲು ಬಯಸಿದರಾದರೂ ರಾಹುಲ್ ಗಾಂಧಿ ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ಗೊತ್ತಾಗಿದೆ. ಆದರೆ ಡಿ ಕೆ ಶಿವಕುಮಾರ್ ತಾವು ವಾಪಸ್ ತೆರಳುವ ವೇಳೆ ನಿಮ್ಮ ಜೊತೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶ ನೀಡಬೇಕು ಎಂದು ಕೋರಿದರು. ಅದಕ್ಕೆ ಅವರು ಆಗಲಿ ಎಂದು ಹೇಳಿದರೆಂದು ಗೊತ್ತಾಗಿದೆ.
ಹೈಕಮಾಂಡ್ ನಿರ್ಧಾರ: ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಸ್ತಾಂತರ, ಸಂಪುಟ ಪುನಾಚನೆ ಸೇರಿದಂತೆ ಯಾವುದೇ ವಿಷಯದಲ್ಲೂ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ಈ ಬಗ್ಗೆ ಹೈಕಮಾಂಡ್ ಹೇಳಿದಂತೆ ಇಬ್ಬರು ಕೇಳುತ್ತೇವೆ ಎಂದರು.
ಈ ವಿಚಾರದ ಗೊಂದಲಗಳ ಕುರಿತಾಗಿ ನಾನು ಅಥವಾ ಉಪಮುಖ್ಯಮಂತ್ರಿಗಳು ಮಾತನಾಡಬೇಕು. ನಮ್ಮಿಬ್ಬರಲ್ಲೂ ಯಾವುದೇ ಗೊಂದಲ ಇಲ್ಲ. ಕೆಲವು ಶಾಸಕರುಗಳಿಗೆ ಮಾಹಿತಿ ಇಲ್ಲದೆ ಏನೋ ಹೇಳುತ್ತಿದ್ದಾರೆ. ಮಾಧ್ಯಮಗಳು ಅನಗತ್ಯವಾಗಿ ಗೊಂದಲ ಮೂಡಿಸುತ್ತಿವೆ ಎಂದರು.
ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅಲ್ಲದೆ ಈ ಬಗ್ಗೆ ಚರ್ಚಿಸಲು ಸದ್ಯಕ್ಕೆ ನಾನು ದೆಹಲಿಗೂ ಹೋಗುತ್ತಿಲ್ಲ. ಶಾಸಕರು ಈ ವಿಚಾರವಾಗಿ ಏನೇ ಮಾತನಾಡಬಹುದು. ಅಂತಿಮವಾಗಿ ನಾವಿಬ್ಬರು ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದರು.




