ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿರುವ ಎಚ್ಎಂಪಿವಿ ಹೊಸದಲ್ಲ. ಇದು 2001ರಿಂದ ನಮ್ಮ ದೇಶದಲ್ಲಿದೆ. ಇದರಿಂದ ಯಾವುದೇ ಅಪಾಯವಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರೊಂದಿಗೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಸಂಬಂಧ ರಾಜ್ಯದಲ್ಲಿ ಆರೋಗ್ಯ ಇಲಾಖೆ ಲಾಕ್ ಡೌನ್ ಸೇರಿದಂತೆ ಯಾವುದೇ ಕಠಿಣಕ್ರಮಗಳನ್ನು ಕೈಗೊಳ್ಳುವುದಿಲ್ಲ. ಕೇಂದ್ರದಿಂದಲೂ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಸೂಚನೆಗಳಿಲ್ಲ. ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಐಸಿಎಂಆರ್ ಸೂಚನೆಗಳನ್ನು ಅನುಸರಿಸುತ್ತೇವೆ ಎಂದರು.
ಚೀನಾದಲ್ಲಿ ಕಾಣಿಸಿಕೊಂಡಿರುವ ವೈರಸ್ ಬಗ್ಗೆ ಮಾಹಿತಿ ಇಲ್ಲ. ಇಲ್ಲಿ ಕಾಣಿಸಿರುವ ವೈರಸ್ ಅಪಾಯಕಾರಿಯಲ್ಲ. ಆದರೆ ಉಸಿರಾಟದ ಸಮಸ್ಯೆ ಇರುವವರು, ಮಕ್ಕಳು, ಹಿರಿಯ ನಾಗರಿಕರ ಬಗ್ಗೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.
ಇದು ಮಾರಣಾಂತಿಕವೂ ಅಲ್ಲ. ಉಸಿರಾಟದ ತೊಂದರೆ ಇರುವವರಿಗೆ, ನ್ಯುಮೋನಿಯಾ ಸಮಸ್ಯೆ ಇರುವವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಮತ್ತು ಹಿರಿಯರಲ್ಲಿ ಈ ವೈರಸ್ನಿಂದ ಸ್ಬಲ್ಪ ತೊಂದರೆಯಾಗಬಹುದು. ಅಷ್ಟನ್ನು ಹೊರತುಪಡಿಸಿ, ಬೇರೆ ಯಾವುದೇ ಸಮಸ್ಯೆ ಇಲ್ಲ ಎಂದರು.




