ಬಿಎಂಟಿಸಿ ಅಧ್ಯಕ್ಷರಾಗಿ ವಿ.ಎಸ್.ಆರಾಧ್ಯ ಪದಗ್ರಹಣ
ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಉಜ್ವಲ ಭವಿಷ್ಯವಿದೆ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ಕಾಂಗ್ರೆಸ್ ಪಕ್ಷದ ಆಡಳಿತ: ವಿ.ಎಸ್.ಆರಾಧ್ಯ
ಬೆಂಗಳೂರು: ನಗರದ ಶಾಂತಿನಗರದ ಬಿಎಂಟಿಸಿ ಅಧ್ಯಕ್ಷರಾಗಿ ನೇಮಕರಾದ ವಿ.ಎಸ್.ಆರಾಧ್ಯರವರು ಪದಗ್ರಹಣ ಸಮಾರಂಭ ನಡೆಯಿತು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸದಸ್ಯ ಸಲೀಮ್ ಅಹಮದ್ ಸಮ್ಮುಖದಲ್ಲಿ ಮತ್ತು ನೂತನ ಅಧ್ಯಕ್ಷ ವಿ.ಎಸ್.ಆರಾಧ್ಯ ವಿಶೇಷಪೂಜೆ ಸಲ್ಲಿಸಿ ಪದಗ್ರಹಣ ಮಾಡಿದರು. ಬಿಬಿಎಂಪಿ ಸದಸ್ಯ ಮಾಜಿ ಎಂ.ಬಿ.ಮೋಹನ್ ಕುಮಾರ್ ಉಪಸ್ಥಿತರಿದ್ದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ವಿ.ಎಸ್.ಆರಾಧ್ಯ ಮಾತನಾಡಿ, ಕಳೆದ 40 ವರ್ಷಗಳಿಂದ ಅಖಿಲ ಭಾರತ ಎನ್.ಎಸ್.ಯು.ಐನಿಂದ ರಾಜಕೀಯ ಪ್ರವೇಶ ಮಾಡಿದ ನಾನು, ಯುವ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಮತ್ತು ಇದೀಗ ಕೆಪಿಸಿಸಿಯಲ್ಲಿ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಿದ್ದಾಂತದಂತೆ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ. ಎಲ್ಲ ಧರ್ಮ, ಜಾತಿ ವರ್ಗದವರಿಗೆ ಸರಿಸಮಾನವಾಗಿ ಅವಕಾಶ ನೀಡುತ್ತಿದೆ. ಕಾಂಗ್ರೆಸ್ ಪಕ್ಷ ಬಡವರ ಪರ, ಜಾತ್ಯತೀತ ಸಿದ್ದಾಂತದ ಮೇಲೆ ಸಂಘಟನೆ ಮಾಡುತ್ತಿದೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಉಜ್ವಲ ಭವಿಷ್ಯವಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.
ಬಿಎಂಟಿಸಿಯಲ್ಲಿ ಶಕ್ತಿ ಯೋಜನೆಯಿಂದ ಕೋಟ್ಯಂತರ ಮಹಿಳೆಯರು ಬಸ್ ಪ್ರಯಾಣವನ್ನು ಉಚಿತವಾಗಿ ಮಾಡುತ್ತಿರುವುದರಿಂದ ಕೂಲಿ ಕಾರ್ಮಿಕರು, ಗಾರ್ಮೇಂಟ್ಸ್, ಇನ್ನಿತರೆ ಕೆಲಸ ಮಾಡುವ ಮಹಿಳೆಯರಿಗೆ 3ರಿಂದ 4ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ಹಾಗೂ ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.
ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಪಕ್ಷ ಗುರುತಿಸಿ ಬಿಎಂಟಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳು ಹೇಳುತ್ತೇನೆ ಎಂದರು.
ಶಾಸಕರು, ಮಾಜಿ ಶಾಸಕರು, ಬಿಎಂಟಿಸಿ ಅಧಿಕಾರಿಗಳು, ನಿಗಮದ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮಂಚೂಣಿ ಪ್ರಮುಖ ಮುಖಂಡರು ಪದಗ್ರಹಣ ಕಾರ್ಯಕ್ರಮದಲ್ಲಿ ಹಾಜರಿದ್ದರು.




