ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 34,027 ಪ್ರಾಥಮಿಕ ಹಾಗೂ 9499 ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ವಿಧಾನಸಭೆಗೆ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಪ್ರಶ್ನೋತ್ತರವ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರಬದಲಿಗೆ ಉತ್ತರ ನೀಡಿದ ಸಚಿವ ಸುಧಾಕರ್ ಅವರು, ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಮುಗಿದ ನಂತರ ಶಿಕ್ಷಕರ ಮರು ಹೊಂದಾಣಿಕೆ ಮಾಡಲಾಗುವುದು ಎಂದರು.
ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ, ವಿದ್ಯಾರ್ಥಿಗಳ ಪಾಠ-ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದರು.
ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆಯಿದ್ದು, ಹೊಸ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಮಕ್ಕಳ ಸಂಖ್ಯೆ ಹೆಚ್ಚಿರುವ ಕಡೆಗಳಲ್ಲಿ ಶಿಕ್ಷಕರ ಮರು ಹೊಂದಾಣಿಕೆ ಮಾಡಲಾಗುತ್ತಿದೆ. 25 ಮಕ್ಕಳಿಗಿಂತ ಕಡಿಮೆಯಿರುವ 10,000 ಶಾಲೆಗಳು ರಾಜ್ಯದಲ್ಲಿವೆ. ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಆಹಾರ ನೀಡಲಾಗುವುದು ಎಂದರು.
ಒಂದರಿಂದ-5ನೇ ತರಗತಿಯವರೆಗಿನ ಹಿರಿಯ ಶಾಳೆಗಳಿಗೆ 30 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಪ್ರೌಡಶಾಲೆಗಳಲ್ಲಿ 70 ವಿದ್ಯಾರ್ಥಿಗಳಿಗೆ ಒಂದು ವಿಭಾಗದಂತೆ ವಿಂಗಡಿಸಿ 7 ಶಿಕ್ಷಕರನ್ನು ನಿಗದಿಪಡಿಸಿದೆ. 5 ಅಥವಾ ಅದಕ್ಕಿಂತ ಹೆಚ್ಚಿರುವ ಶಾಲೆಗಳಿಗೆ ಮುಖ್ಯೋಪಾಧ್ಯಾಯರನ್ನು ಹೊರತುಪಡಿಸಿ 1.5 ರಂತೆ ಶಿಕ್ಷಕರನ್ನು ನಿಗದಿಗೊಳಿಸಲಾಗಿದೆ ಎಂದರು.
ಮಹಾಲಕ್ಷ್ಮೀ ವಿಧಾನಸಭಾ ಕ್ಷೇತ್ರದ ಕುರುಬರಹಳ್ಳಿ, ಕಮಲಾನಗರ, ಕೃಷ್ಣಾನಂದ ನಗರ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ. ಕಂಪ್ಯೂಟರ್, ವಿಜ್ಞಾನ, ರೊಬೋಟಿಕ್ ಲ್ಯಾಬ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಶಾಸಕರು ಒದಗಿಸಿದ್ದಾರೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ ಶಾಸಕ ಕೆ.ಗೋಪಾಲಯ್ಯ, ಕೃಷ್ಣಾನಂದ ನಗರ, ವೃಷಭಾವತಿ ನಗರ, ಕಮಲಾ ನಗರ, ಕುರುಬರಹಳ್ಳಿ ಶಾಲೆಗಳಿಗೆ 56 ಶಿಕ್ಷಕರ ಕೊರತೆ ಇದೆ. ಶಿಕ್ಷಕರಿಲ್ಲದೇ ಗುಣಮಟ್ಟದ ಶಿಕ್ಷಣ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಶಾಲೆಗಳಿಗೆ ಅನುದಾನವಿಲ್ಲದೇ ಉನ್ನತ ಮೂಲಸೌಲಭ್ಯಗಳೊಂದಿಗೆ, ಉನ್ನತ ದರ್ಜೆಯ ಕೊಠಡಿ ನಿರ್ಮಿಸಲಾಗಿದೆ. ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳು ಸರಿಯಾಗಿ ವೇತನ ನೀಡಬೇಕು, ಎಲ್‌ಕೆಜಿ-ಯಕೆಜಿಯಲ್ಲಿ ಪ್ರತಿಶಾಲೆಯಲ್ಲೂ 150 ಮಕ್ಕಳು ಇದ್ದಾರೆ. ಶಾಲೆಗಳಿಗೆ ಆಯಾಗಳು ಬೇಕು. ಕೇವಲ 30 ಮಕ್ಕಳಿಗೆ ಆಹಾರ ನೀಡುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಸಚಿವರು ಭೇಟಿ ನೀಡಿ ಒಮೆ ಪರೀಕ್ಷೀಸಲಿ,ಇ ಕಂಪ್ಯೂಟರ್, ವಿಜ್ಞಾನ, ರೊಬೋಟಿಕ್ ಲ್ಯಾಬ್, ಇ-ಲೈಬ್ರಿ ಸೌಲಭ್ಯ ಕಲ್ಪಿಸಿ ಮಾದರಿ ಶಾಲೆಗಳಾಗಿ ನಿರ್ಮಿಸಲಾಗಿದೆ ಎಂದರು.




