ಬೆಳಗಾವಿ: ಜಿಲ್ಲೆಯ ಸಾರಿಗೆ ಇಲಾಖೆಯ ಕಚೇರಿಯಲ್ಲಿ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಇನ್ನಿತರ ಸಿಬ್ಬಂದಿ ಕೊರತೆ ಬಹಳಷ್ಟಿದೆ ಎಂದು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸದ್ಯ ಇರುವ ಸಿಬ್ಬಂದಿ ಮೇಲಿರುವ ಹೊರೆ ಕಡಿಮೆ ಮಾಡಲು ಅದಷ್ಟು ಬೇಗ ಇನ್ನಷ್ಟು ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು. ಇದರಿಂದ ಮತ್ತಷ್ಟು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಾಯವಾಗಲಿದೆ ಎಂದರು.
ಇಲಾಖೆಯ ಅಧಿಕಾರಿ, ಸಿಬ್ಬಂದಿ ವಾಹನ ಸವಾರರು ಹಾಗೂ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಿ, ತ್ವರಿತವಾಗಿ ಸೇವೆಗಳನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಎ. ಎಂ, ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಧಾರವಾಡ ಉತ್ತರದ (ಪ್ರವರ್ತನ) ಅಪರ ಸಾರಿಗೆ ಆಯುಕ್ತ ಕೆ. ಟಿ ಹಾಲಸ್ವಾಮಿ, ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಎಂ. ಪಿ.ಓಂಕಾರೇಶ್ವರಿ, ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ್ ಮುಂಡಾಸ, ನಿವೃತ್ತ ಪ್ರಾದೇಶಿಕ ಸಾರಿಗೆ ಆಯುಕ್ತರಾದ ಶಿವಾನಂದ ಮಗದುಮ್ಮ, ಗುತ್ತಿಗೆದಾರ ಉದಯ ಕುಮಾರ ಆರ್. ಶೆಟ್ಟಿ ಸೇರಿದಂತೆ ಸಾರಿಗೆ ಇಲಾಖೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.




