ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ವತಿಯಿಂದ ಬೆಂಗಳೂರು ನಗರದಲ್ಲಿ ಆಯೋಜಿಸಲಾದ ಎಸ್‌ಡಿಪಿಐ ಪಕ್ಷ ಸಮಾವೇಶವು ಯಶಸ್ವಿಯಾಗಿ ನಡೆಯಿತು. ಸಮಾವೇಶದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಆಫ್ಸರ್ ಕೊಡ್ಲಿಪೇಟೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಸಂದರ್ಭದಲ್ಲಿ ಮಾತನಾಡಿದ ಅವರು, SIR–2025 ಪ್ರಕ್ರಿಯೆಯ ಹೆಸರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ತಿದ್ದುಪಡಿ, BLOಗಳ ಮೂಲಕ ನಡೆಯುತ್ತಿರುವ ಮ್ಯಾಪಿಂಗ್, ದಾಖಲೆಗಳ ನೆಪದಲ್ಲಿ ಮತದಾರರನ್ನು ಹೊರಗಿಡುವ ಅಪಾಯಗಳು ಕುರಿತು ಗಂಭೀರ ಎಚ್ಚರಿಕೆ ನೀಡಿದರು.
2002ರ ಮತದಾರರ ಪಟ್ಟಿಯನ್ನು ಆಧಾರವಾಗಿಸಿಕೊಂಡು 2025ರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಮೂಲಕ ಅರ್ಹ ನಾಗರಿಕರನ್ನು ಸಂಶಯದ ದೃಷ್ಟಿಯಿಂದ ನೋಡುವ, ಬಡವರು, ದಲಿತರು, ಅಲ್ಪಸಂಖ್ಯಾತರು ಮತ್ತು ವಲಸೆ ಕಾರ್ಮಿಕರನ್ನು ಮತದಾನದ ಹಕ್ಕಿನಿಂದ ವಂಚಿಸುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
BLOಗಳ ಮೂಲಕ ನಡೆಯುತ್ತಿರುವ ಮ್ಯಾಪಿಂಗ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ, ಮತ್ತು ಅನೇಕ ಕಡೆಗಳಲ್ಲಿ ಕುಟುಂಬದ ದಾಖಲೆಗಳು, ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಳುವ ಮೂಲಕ ಜನರನ್ನು ಭಯಭೀತಗೊಳಿಸಲಾಗುತ್ತಿದೆ. ಇದು ನೇರವಾಗಿ ಸಂವಿಧಾನಾತ್ಮಕ ಮತದಾನ ಹಕ್ಕಿನ ಮೇಲೆ ದಾಳಿ ಎಂದು ಅವರು ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬ ನಾಗರಿಕನಿಗೂ ಮತದಾನ ಮಾಡುವ ಹಕ್ಕು ಇದೆ; ಆ ಹಕ್ಕನ್ನು ದಾಖಲೆಗಳ ನೆಪದಲ್ಲಿ ಕಸಿದುಕೊಳ್ಳಲು ಯಾವುದೇ ಸರ್ಕಾರಕ್ಕೂ ಅಧಿಕಾರ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇಂತಹ ಜನವಿರೋಧಿ ಪ್ರಕ್ರಿಯೆಗಳ ವಿರುದ್ಧ ಎಸ್‌ಡಿಪಿಐ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಘೋಷಿಸಿದರು.
ಕಾರ್ಯಕರ್ತರು ನೆಲಮಟ್ಟದಲ್ಲಿ ಜನರಿಗೆ ಜಾಗೃತಿ ಮೂಡಿಸಿ, ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಹೆಸರು ಕಡಿತಗೊಳ್ಳದಂತೆ ಗಮನ ವಹಿಸಬೇಕು, BLO ಪ್ರಕ್ರಿಯೆಗಳನ್ನು ಎಚ್ಚರಿಕೆಯಿಂದ ಗಮನಿಸಬೇಕು ಹಾಗೂ ಬೂತ್ ಮಟ್ಟದಲ್ಲಿ ಬೂತ್ ಮಟ್ಟದ ಸಹಾಯಕರನ್ನು ನೇಮಕ ಮಾಡಿ ( BLA) ಬಿಎಲ್ಓ ಗಳೊಂದಿಗೆ ಸಂವಹನ ನಡೆಸಿ ಯಾವುದೇ ಅರ್ಹ ಮತದಾರರು ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಹೊರಗುಳಿಯದಂತೆ ಎಚ್ಚರ ವಹಿಸಲು ಪಕ್ಷವು ಈಗಾಗಲೇ ತೀರ್ಮಾಸಿದೆ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಕರೆ ನೀಡಿದರು.
ಸಮಾವೇಶದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಲೀಂ ಅಹಮದ್, ಜಿಲ್ಲಾ ಉಪಾಧ್ಯಕ್ಷರಾದ ಶಂಶುದ್ದೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ತಬ್ರೇಝ್, ಕಾರ್ಯದರ್ಶಿಗಳಾದ ವಸೀಮ್, ರಾಹಿಲ್, ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ನ ಸದಸ್ಯರಾದ ಮಹಬೂಬ್ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಹುದ್ದೆಯ ನಾಯಕರು, ಕಾರ್ಯಕರ್ತರು, ವಿವಿಧ ಮಸೀದಿಗಳ ಧರ್ಮಗುರುಗಳು ಮತ್ತು ಸಾರ್ವಜನಿಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜನತಂತ್ರ ಹಾಗೂ ಮತದಾನದ ಹಕ್ಕು ರಕ್ಷಣೆಗೆ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಸಂಕಲ್ಪದೊಂದಿಗೆ ಸಮಾವೇಶ ಮುಕ್ತಾಯವಾಯಿತು.










