ಬೆಂಗಳೂರು: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸ್ವರೂಪದ ವಿಷಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಶಾಲಾ ಪರೀಕ್ಷೆ ಮಂಡಳಿ ತೆರೆ ಎಳೆದಿದೆ. ಪ್ರಸಕ್ತ ವರ್ಷ ಸಂಪೂರ್ಣ ಭಿನ್ನವಾದ ಪ್ರಶ್ನೆ ಪತ್ರಿಕೆ ಇರಲಿದೆ ಎಂಬ ಚರ್ಚೆಗಳು ಆರಂಭಗೊಂಡಿರುವ ಬೆನ್ನಲ್ಲೇ ಇಂತಹ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟೀಕರಣ ನೀಡಿದೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಪ್ರಸಕ್ತ ಸಾಲಿನ ಪ್ರಶ್ನೆ ಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷ ಬಸವರಾಜೇಂದ್ರ ಹೆಚ್. ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಆ ಸಮಿತಿಯು ನೀಡುವ ವರದಿಯಂತೆ ಕ್ರಮವಹಿಸಲಾಗುವುದು.ಹಾಗಾಗಿ ಪ್ರಸಕ್ತ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ಕಳೆದ ವರ್ಷದ ಶೈಕ್ಷಣಿಕ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದಿದ್ದಾರೆ.
ಈ ವಿಷಯವಾಗಿ ಕೆಲವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.




