ಬೆಂಗಳೂರು: 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ಚರ್ಚೆ ಅನಗತ್ಯ. ರಾಜ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡಿದ್ದು, ಅದರಂತೆ ಶಾಸಕಾಂಗ ಪಕ್ಷದ ಸಭೆ ಕರೆದು ನಾವೆಲ್ಲ ಒಟ್ಟಾಗಿ ಅವರನ್ನು ನಮ್ಮ ನಾಯಕ ಎಂದು ಆಯ್ಕೆ ಮಾಡಿದ್ದೇವೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.
ಆಪರೇಷನ್ ಕಮಲ ಕಾರ್ಯಾಚರಣೆ ಮೂಲಕ ರಾಜ್ಯದಲ್ಲಿ ಎರಡು ಬಾರಿ ಅಧಿಕಾರ ಹಿಡಿದ ಬಿಜೆಪಿಯವರು ಸರ್ಕಾರ ಪತನ ಹೊಂದುವ ಕನಸು ಕಾಣುತ್ತಿದ್ದಾರೆ. ಆದರೆ ನಮ್ಮ ಎಲ್ಲಾ ಶಾಸಕರು ಒಟ್ಟಾಗಿದ್ದೇವೆ. ಈ ಸರ್ಕಾರ ಐದು ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಲಿದೆ ಎಂದರು.




