ಮಕ್ಕಳು ದೇವರ ಸಮಾನ, ಅವರಲ್ಲಿ ಜಾತಿ, ಮತ, ಪಂಥ ಭೇದವಿರುವುದಿಲ್ಲ: ಬಿ.ವೈ.ವಿಜಯೇಂದ್ರ

10 months ago

ವಿದ್ಯಾವಂತ ಸಮಾಜ ನಿರ್ಮಾಣದ ಗುರಿ, ದೇಶ ಅಭಿವೃದ್ಧಿಗೆ ಶಿಕ್ಷಣ ಮುಖ್ಯ

ಬೆಂಗಳೂರು: ಜಯನಗರದ ಶ್ರೀ ಚಂದ್ರಗುಪ್ತ  ಮೌರ್ಯ (ಶಾಲಿನಿ ಆಟದ) ಮೈದಾನದಲ್ಲಿ ರಕ್ಷಾ ಫೌಂಡೇಷನ್ (ರಿ)ವತಿಯಿಂದ 13ನೇ ವರ್ಷದ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ  ಉಚಿತವಾಗಿ 2 ಲಕ್ಷ ನೋಟ್ ಪುಸ್ತಕಗಳ ವಿತರಣೆ ಹಾಗೂ  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಅನಾಥ ಆಶ್ರಮದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ನಡೆಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ರಕ್ಷಾ ಫೌಂಡೇಷನ್ ಸಂಸ್ಥಾಪಕ, ಶಾಸಕ ಸಿ.ಕೆ.ರಾಮಮೂರ್ತಿ, ಶಾಸಕ ಉದಯ್ ಗರುಡಾಚಾರ್, ಬಿಗ್ ಬಾಸ್ ಖ್ಯಾತಿಯ ಪ್ರಥಮ್  ಬಿಬಿಎಂಪಿ ಮಾಜಿ ಸದಸ್ಯರಾದ ನಾಗರತ್ನ ರಾಮಮೂರ್ತಿ, ನಟ ವಸಿಷ್ಟ ಸಿಂಹ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ನೋಟ್ ಪುಸ್ತಕ, ಲ್ಯಾಪ್ ಟಾಪ್ ಗಳನ್ನು ವಿತರಿಸಿದರು.

ಇದೇ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಕ್ಷಾ ಫೌಂಡೇಷನ್ ಸ್ಥಾಪಕರಾದ ಶಾಸಕ ರಾಮಮೂರ್ತಿರವರ ನೇತೃತ್ವದಲ್ಲಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಸಹಕಾರ ನೀಡುತ್ತಿದ್ದಾರೆ ಎಂದರು.

11ನೇ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಇಂದು ಭಾರತದ ಯೋಗ ವಿಶ್ವಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ನೇತೃತ್ವದಲ್ಲಿ ಹೆಚ್ಚು ಪ್ರಚಲಿತಕ್ಕೆ ಬಂತು ಎಂದರು.

ಮಕ್ಕಳು ದೇವರ ಸಮಾನ, ಅವರ ಮನಸ್ಸಿನಲ್ಲಿ  ಯಾವ ಕೆಟ್ಟ ಚಿಂತನೆಯು ಇರುವುದಿಲ್ಲ, ಜಾತಿ ಮತ ಪಂಥ ಭೇದವಿರುವುದಿಲ್ಲ. ಸಾಧನೆ ಇಲ್ಲದೇ ಹೋದರೆ ಸಾವಿಗೆ ಅರ್ಥವಿಲ್ಲ, ಹುಟ್ಟಿದ ಮೇಲೆ ಸಾಧನೆ ಮಾಡಿ ನಿಲ್ಲಬೇಕು ಎಂದರು.

ಆರ್.ಅಶೋಕ್ ಮಾತನಾಡಿ, ಪ್ರತಿ ವರ್ಷ ಅಪರೂಪದ ಕಾರ್ಯಕ್ರಮವನ್ನು  ರಕ್ಷಾ ಫೌಂಡೇಷನ್ ಮಾಡುತ್ತಿದೆ, ಶಿಕ್ಷಣಕ್ಕೆ  ಸಹಕಾರ ನೀಡುತ್ತಿದ್ದಾರೆ. ಗುರುಗಳು ಪಾಠ ಮಾಡುತ್ತಾರೆ, ತಂದೆ, ತಾಯಿ ಹೇಳಿಕೊಡುತ್ತಾರೆ. ಆದರೆ  ನಾವೆ ಪರೀಕ್ಷೆ ಬರೆಯಬೇಕು. ಯಾರು ನಿಮಗೆ ಸಹಕಾರ ನೀಡುವುದಿಲ್ಲ. ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದರೆ ಜೀವನದಲ್ಲಿ ಉತ್ತಮ ಅಂಕಗಳಿಸಿ, ಸಾಧನೆ ಮಾಡಬಹುದು ಎಂದರು.

ಶಾಸಕ ಸಿ.ಕೆ.ರಾಮಮೂರ್ತಿ ಮಾತನಾಡಿ, ವಿದ್ಯಾವಂತರಾದರೆ ಸಮಾಜದಲ್ಲಿ ಗೌರವ, ಮಾನ್ಯತೆ ಸಿಗುತ್ತದೆ, ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ವಿದ್ಯಾವಂತರಾಗಬೇಕು, ದೇಶ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಮುಖ್ಯ. ಶ್ರೀಮಂತ ಕುಟುಂಬದ ಮಕ್ಕಳಿಗೆ ಎಲ್ಲವು ಸಿಗುತ್ತದೆ. ಆದರೆ ಬಡ ಮತ್ತು ಮಧ್ಯಮ ವರ್ಗದವರಿಗೆ ಆರ್ಥಿಕ ಮುಗ್ಗಟ್ಟಿನಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದರು.

ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ಎಂದು ರಕ್ಷಾ ಫೌಂಡೇಷನ್ ಉಚಿತ ನೋಟ್ ಪುಸ್ತಕ ಮತ್ತು ಉನ್ನತ ವ್ಯಾಸಂಗದ ಅನುಕೂಲಕ್ಕೆ ಲ್ಯಾಪ್ ಟಾಪ್ , ವಿದ್ಯಾರ್ಥಿ ವೇತನ ನೀಡುತ್ತಾ ವಿದ್ಯಾವಂತ ಸಮಾಜ ನಿರ್ಮಾಣ ಮಾಡಬೇಕು ಎಂಬ ಉದ್ದೇಶ ನಮ್ಮದು ಎಂದರು.

ಬಿಟ್ಸ್ ಗುರು ತಂಡ ಸಂಗೀತ ಕಾರ್ಯಕ್ರಮ ಮತ್ತು ಪುಟ್ಟರಾಜುರವರ ಜಾದು ಪ್ರದರ್ಶನ ಏರ್ಪಡಿಸಲಾಗಿತ್ತು.

ಜಯದೇವ ಆಸ್ಪತ್ರೆಗೆ 2 ಲಕ್ಷ ರೂಪಾಯಿ ದೇಣಿಗೆಯನ್ನು ಜಯದೇವ ಆಸ್ಪತ್ರೆ ನಿರ್ದೇಶಕರಾದ ರವೀಂದ್ರನಾಥ್ ರವರಿಗೆ ನೀಡಲಾಯಿತು.

ಪಾಲಿಕೆ ಮಾಜಿ ಸದಸ್ಯಕೆ.ಉಮೇಶ್ ಶೆಟ್ಟಿ, ಸೋಮಶೇಖರ್, ಗೋವಿಂದನಾಯ್ಡು, ದೀಪಿಕಾ ಮಂಜುನಾಥ್ ರೆಡ್ಡಿ, ಚನ್ನಗಿರಿಯಪ್ಪ, ಚಂದ್ರಶೇಖರ ರಾಜು, ಬಿಜೆಪಿ ಮುಖಂಡ ತಮ್ಮೇಶ್ ಗೌಡ, ಲಕ್ಷಿಕಾಂತ್, ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ನರೇಶ್ ಮೊದಲಾದವರು ಉಪಸ್ಥಿತರಿದ್ದರು.

Leave a Reply