ಕಾರವಾರ: ಜಿಲ್ಲೆಯ ಕೈಗಾದಲ್ಲಿ ಅಣು ವಿದ್ಯುತ್ ಸ್ಥಾವರ ಇರುವುದರಿಂದ ರಾಷ್ಟಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನವದೆಹಲಿ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಾರವಾರ ವತಿಯಿಂದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಿಲ್ಲೆಯು ಯಾವ ರೀತಿ ಸನ್ನದ್ಧವಾಗಿದೆ ಎಂಬುದರ ಬಗ್ಗೆ ಅಣಕು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎನ್ಡಿಆರ್ಎಫ್ ನ ರಕ್ಷಣಾ ಉಪಕರಣಗಳ ಪ್ರದರ್ಶನ ವಿಕ್ಷೀಸಿ ಮಾತನಾಡಿದರು.
ಅಣು ವಿಕಿರಣ ಸೋರಿಕೆ ಸಂದರ್ಭದಲ್ಲಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದರ ಬಗ್ಗೆ ತುರ್ತು ಸಂದರ್ಭ ಸೃಷ್ಟಿಸಿ ಅಣಕು ಕಾರ್ಯಾಚರಣೆ ನಡೆಯಲಿದೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಇದು ಕೇವಲ ಅಣಕು ಕಾರ್ಯಾಚರಣೆಯಾಗಿದೆ ಎಂದರು.
ಕಂದಾಯ ಇಲಾಖೆ, ಪೊಲೀಸ್, ಜಿಲ್ಲಾ ಪಂಚಾಯತ, ಅಗ್ನಿ ಶಾಮಕ ದಳ. ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಎನ್ಡಿಆರ್ಎಫ್ ತಂಡ ಸೇರಿದಂತೆ 30 ಕ್ಕೂ ಹೆಚ್ಚು ಇಲಾಖೆಗಳ ಸಹಯೋಗದೊಂದಿಗೆ ಡಿ.11ರಂದು ಅಣಕು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ರಾಷ್ಟಿçಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಡಾ. ದಿನೇಶ ಕುಮಾರ್ ಅಸ್ವಾಲ್, ಹಿರಿಯ ಸಲಹೆಗಾರ ಮೇಜರ್ ಜನರಲ್ ಅಜಯ ಕುಮಾರ್ ವರ್ಮಾ, ಸಿಎಂಜಿ ಯ ಸದಸ್ಯ ಕಾರ್ಯದರ್ಶಿ ಶರಣ ಸೆತ್, ಎನ್ಡಿಆರ್ಎಫ್ ಕಮಾಂಡೆಂಟ್ ವಿ.ವಿ.ಎನ್ ಪ್ರಸನ್ನ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲಿಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿ ಶಂಕರ, ಕೈಗಾ ಅಣು ವಿದ್ಯುತ್ ಸ್ಥಾವರದ ಸ್ಥಳ ನಿರ್ದೇಶಕ ವಿನೋದ ಕುಮಾರ್, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್ ತರಬೇತಿ ನಿರತ ಐಎಎಸ್ ಅಧಿಕಾರಿ ಜೂಫಿಶಾನ್ ಹಕ್ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಮತ್ತಿತ್ತರರು ಹಾಜರಿದ್ದರು.




