ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುವೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮಳಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರೊಂದಿಗೆ ಅತೀ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆ.
ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ, ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಕಾರ್ಯಕ್ರಮಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಸಬಯಸುತ್ತೇನೆ.
– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ




