ಬೆಂಗಳೂರು: ತಮ್ಮ ಮೈ, ಮನಗಳಲ್ಲಿ ಕಾಂಗ್ರೆಸ್ ಪಕ್ಷದ ರಕ್ತ ಹರಿಯುತ್ತಿದ್ದು ಯಾವುದೇ ಕಾರಣಕ್ಕೂ ತಾವು ಪಕ್ಷ ಬಿಡುವ ಮಾತೇ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
ದೆಹಲಿ ಪ್ರವಾಸದ ವೇಳೆ ಪಕ್ಷದ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ಹಲವರನ್ನು ಭೇಟಿ ಮಾಡಿರುವ ಕುರಿತಂತೆ ವಿವರಣೆ ನೀಡಿದ ಅವರು, ತಾವು ಯಾವುದೇ ಹುದ್ದೆಯಲ್ಲಿದ್ದರೂ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಘೋಷಿಸಿದರು.
ತಾವು ಬಿಜೆಪಿ ಸೇರುವ ಕುರಿತಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಈಶಾ ಫೌಂಡೇಶನ್ ನ ಜಗ್ಗಿ ವಾಸುದೇವ್ ಅವರು ಮೈಸೂರಿನವರು. ನನ್ನ ಮನೆಗೆ ಬಂದು ಶಿವರಾತ್ರಿಯ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಹೀಗಾಗಿ ನಾನು ಈಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಕುಂಭಮೇಳದಲ್ಲಿ ಪಾಲ್ಗೊಂಡು ಪುಣ್ಯ ಸ್ನಾನ ಮಾಡಿದ್ದೇನೆ. ಇದನ್ನು ನೋಡಿ ಸಾಮಾಜಿಕ ಜಾಲತಾಣಗಳಲ್ಲಿ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಬಿಂಬಿಸಲಾಗುತ್ತಿದೆ ಎಂದರು.
ಅಮಿತ್ ಶಾ ಅವರನ್ನು ನಾನು ಇನ್ನೂ ಭೇಟಿ ಮಾಡಿಲ್ಲ. ಆಗಲೇ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ವೈರಲ್ ಮಾಡುತ್ತಿದ್ದಾರೆ. ಈ ಎಲ್ಲವೂ ಸಂಪೂರ್ಣ ಸುಳ್ಳು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾದ ನನಗೆ ಎಐಸಿಸಿ ಕಚೇರಿ ದೆವಾಲಯವಿದ್ದಂತೆ. ಹೀಗಾಗಿ ಅಲ್ಲಿಗೆ ಹೋಗಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.
ಹೈಕಮಾಂಡ್ ಈ ಹಿಂದೆ ತಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರನ್ನಾಗಿ ನೇಮಿಸಿತ್ತು. ನಾವಿಬ್ಬರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಅವರನ್ನು ಮುಖ್ಯಮಂತ್ರಿ ಮತ್ತು ನನ್ನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಬ್ಬರು ನಮ್ಮ ಕೆಲಸವನ್ನು ನಿಭಾಯಿಸುತ್ತಿದ್ದೇವೆ. ಕಾಲದಿಂದ ಕಾಲಕ್ಕೆ ಹೈಕಮಾಂಡ್ ಕೊಟ್ಟ ಕೆಲಸ ಮಾಡುತ್ತಿದ್ದೇವೆ ಎಂದರು.
ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ನಾನು ಪ್ರಚಾರ ಸಮಿತಿ ಅಧ್ಯಕ್ಷ ಆಗಿದ್ದೆ. ಪಕ್ಷ ನನಗೆ ಹಲವು ಜವಾಬ್ದಾರಿ ಕೊಟ್ಟು ನಾಯಕನಾಗಿ ಮಾಡಿದೆ. ನನಗೆ ವರ್ಚಸ್ಸಿದೆ. ಬಲ ಇದೆ. ನನ್ನನ್ನು ದೆಹಲಿಗೂ ಕರೆಯುತ್ತಾರೆ. ಬಿಹಾರಕ್ಕೆ ಕರೆಯುತ್ತಾರೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣಕ್ಕೂ ಕರೆಯುತ್ತಾರೆ. ನನಗೆ ನಾಯಕತ್ವ ಇದೆ ಎಂಬ ಕಾರಣಕ್ಕೆ ಬೇರೆ ರಾಜ್ಯಕ್ಕೆ ಕರೆಯುತ್ತಾರೆ ಎಂದರು.
ನನಗೆ ಇರುವ ಅನುಭವ, ಶಕ್ತಿ, ವೈಬ್ರೇಷನ್ ಪಕ್ಷಕ್ಕೆ ಬಳಸಬೇಕು. ಸಿದ್ದರಾಮಯ್ಯ ಅವರನ್ನು ಪಕ್ಷ ಎರಡು ಬಾರಿ ಸಿಎಂ, ವಿರೋಧ ಪಕ್ಷದ ನಾಯಕರನ್ನಾಗಿಯೂ ಮಾಡಿದೆ. ಅವರೂ ಕೂಡ ವರ್ಚಸ್ಸಿನ ನಾಯಕ. ಅವರೂ ಪಕ್ಷದ ನೇತೃತ್ವ ವಹಿಸುತ್ತಾರೆ. ಸಾಮೂಹಿಕ ನಾಯಕತ್ವದಲ್ಲೇ ಮುಂದುವರೆಯುತ್ತೇವೆ ಎಂದರು.
ದೆಹಲಿಗೆ ಹೋದಾಗ ಹೈಕಮಾಂಡ್ ಭೇಟಿ ಮಾಡಲೇಬೇಕು. ನಮ್ಮ ಪಕ್ಷದ ಕಚೇರಿಗೆ ಹೋಗದೆ ಬಿಜೆಪಿ ಕಚೇರಿಗೆ ಹೋಗಬೇಕೇ? ಕೇಶವಕೃಪಾಗೆ ಹೋಗಲು ಆಗುತ್ತದೆಯೇ? ಕಾಂಗ್ರೆಸ್ ಕಚೇರಿ ನಮಗೆ ದೇವಸ್ಥಾನ ಇದ್ದಂತೆ. ಪ್ರಯತ್ನ ವಿಫಲ ಆಗಬಹುದು, ಪ್ರಾರ್ಥನೆ ವಿಫಲ ಆಗುವುದಿಲ್ಲ ಎಂದರು.




