ದೆಹಲಿ: ಅಧಿಕಾರ ಹತ್ತಾಂತರ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಕೇಂದ್ರ ಮಂತ್ರಿಗಳೊಂದಿಗೆ ಚರ್ಚಿಸಲು ದೆಹಲಿಗೆ ಆಗಮಿಸಿರುವ ಅವರು ಇದೇ ಕಾರಣಕ್ಕೆ ದೆಹಲಿಗೆ ಬರುವ ಸಿದ್ದರಾಮಯ್ಯ ಅವರೊಂದಿಗೆ ಗುರುವಾರ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ಸಿನ ಹಲವು ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಈ ಮಾತುಕತೆ ವೇಳೆ ಅಧಿಕಾರ ಹಸ್ತಾಂತರ ಕುರಿತಂತೆ ನಡೆದಿರುವ ಚರ್ಚೆಗಳಿಗೆ ಸ್ಪಷ್ಟ ಉತ್ತರ ಸಿಗಲಿದೆ ಎಂದು ಭಾವಿಸಲಾಗಿದೆ ಹಾಗೂ ನೆನೆಗುದಿಗೆ ಬಿದ್ದಿರುವ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳ ನಾಮಕರಣ ಕುರಿತಂತೆಯೂ ಅಂತಿಮ ತೀರ್ಮಾನ ಹೊರ ಬೀಳಲಿದೆ.
ಈ ಕುರಿತಾಗಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಈ ವಿಚಾರದ ಕುರಿತಂತೆ ಮಾತುಕತೆ ನಡೆಸುವುದು ಅಪ್ರಸ್ತುತ ಎಂದರು.
ಇದೇ 10ರಂದು ನಾನು, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ರಾಹುಲ್ ಗಾಂಧಿ ಅವರೊಂದಿಗೆ ಸಭೆ ಮಾಡಲಿದ್ದು, ಪಕ್ಷದ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದರು.
ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಜು.15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದರು.
ರಾಷ್ಟ್ರ ಮಟ್ಟದ ಒಬಿಸಿ ನಾಯಕರ ಸಭೆ ಇದೇ ತಿಂಗಳು 15ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕೆಪಿಸಿಸಿ ಈ ಸಭೆಯ ಆತಿಥ್ಯ ವಹಿಸಲಿದೆ. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮುಖ್ಯಮಂತ್ರಿಗಳು ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅವರು ಸಮಿತಿಯ ಮುಖ್ಯಸ್ಥರಲ್ಲದೇ ಇದ್ದರೂ, ದೇಶದ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ ಅವರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಅವರ ನಾಯಕತ್ವ ಹಾಗೂ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ ಎಂದರು.




