ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿಸಿದರೆ ತಾವು ಮುಖ್ಯಮಂತ್ರಿಯಾಗಲು ಸಿದ್ದ ಎಂದು ಮಾಜಿ ಮಂತ್ರಿ ಆರ್ ವಿ ದೇಶಪಾಂಡೆ ನೀಡಿರುವ ಹೇಳಿಕೆ ಕಾಂಗ್ರೆಸ್ ನಲ್ಲಿ ಸಾಕಷ್ಟು ವ್ಯಾಖ್ಯಾನ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹಿರಿಯರಾದ ದೇಶಪಾಂಡೆ ಅವರು ಮುಖ್ಯಮಂತ್ರಿ ಆಗಲು ಆಸೆ ಪಟ್ಟಿರುವುದರಲ್ಲಿ ತಪ್ಪೇನೂ ಇಲ್ಲ. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ ಎಂದರು.
ಈ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿ, ಆರ್.ವಿ.ದೇಶಪಾಂಡೆ ಸೇರಿದಂತೆ ಹಲವು ಮಂದಿ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿರುವುದು ಸಾಂದರ್ಭಿಕ ಅಷ್ಟೇ. ನಾನು ಕೂಡ ಈ ಮೊದಲು ಇಂತಹ ಹೇಳಿಕೆ ನೀಡಿದ್ದೇನೆ. ಆದರೆ ನಮಲ್ಲಿ ಯಾವುದೇ ಗೊಂದಲಗಳಿಲ್ಲ. ಪರಸ್ಪರ ಭೇಟಿಯಾಗುತ್ತಿರುತ್ತೇವೆ ಎಂದರು.
ಪಕ್ಷದ ವಿಚಾರ, ಇಲಾಖೆ ಮತ್ತು ಕ್ಷೇತ್ರಕ್ಕೆ ಸಂಬಂಧಪಟ್ಟ ಚರ್ಚೆಗಳಾಗುತ್ತವೆ. ರಾಜಕೀಯದ ಬಗ್ಗೆಯೂ ಮಾತನಾಡುತ್ತೇವೆ. ಅದರಲ್ಲಿ ತಪ್ಪೇನೂ ಇಲ್ಲ ಎಂದು ಸಮರ್ಥಿಸಿಕೊಂಡರು. ಮುಖ್ಯಮಂತ್ರಿ ಬದಲಾವಣೆ ಎಂಬುದು ಹಗಲು ಕನಸು. ಅದು ಸಾಧ್ಯವಿಲ್ಲ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದು, ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬುದು ಆಧಾರರಹಿತ ಎಂದರು.
ಮೀನುಗಾರಿಕೆ ಮತ್ತು ಬಂದರು ಸಚಿವ ಮಂಗಳ ವೈದ್ಯ ಪ್ರತಿಕ್ರಿಯೆ ನೀಡಿ, ಹಿರಿಯರಾದ ದೇಶಪಾಂಡೆ ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ ಹಾಗೂ ಅನುಭವಿಗಳು ಆಗಿದ್ದಾರೆ. ಆದರೆ ಸದ್ಯಕ್ಕೆ ಹುದ್ದೆ ಖಾಲಿ ಇಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದೇಶಪಾಂಡೆಯವರು ಉತ್ತಮ ಸ್ನೇಹಿತರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಮತ್ತು ಸ್ನೇಹ ಇದೆ. ಈ ಹಿನ್ನೆಲೆಯಲ್ಲಿ ಅವರು ಈ ಮಾತು ಹೇಳಿರಬಹುದು. ಅದಕ್ಕೆ ವಿಶೇಷ ವ್ಯಾಖ್ಯಾನ ನೀಡುವ ಅಗತ್ಯವಿಲ್ಲ ಎಂದರು.




