ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ತಮ್ಮ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿದ ಅವರು, ಐಜಿಪಿ ಅಲೋಕ್ ಮೋಹನ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ 15 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಕೇವಲ ತಮ್ಮ ತಂದೆ ಮಾತ್ರವಲ್ಲ ತಮ್ಮನ್ನು ಕೂಡ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿ ಕೆಲವು ದಾಖಲೆಗಳನ್ನು ನೀಡಿದ್ದಾರೆ. ಇದರ ಜೊತೆಗೆ ತಮ್ಮ ಹತ್ಯೆಗೆ ಸುಫಾರಿ ನೀಡಲಾಗಿದೆ ಎಂಬ ಅಂಶವನ್ನು ತಿಳಿಸಿದ್ದಾರೆ.
ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ತಂದೆ ಹಾಗೂ ಸಚಿವ ರಾಜಣ್ಣ ಅವರನ್ನು ಮಾತ್ರವಲ್ಲ ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ ಮೂರು ತಿಂಗಳಿನಿಂದ ಯತ್ನ ನಡೆದಿದೆ. ನನ್ನನ್ನು ಈ ಜಾಲದಲ್ಲಿ ಕೆಡವಲು ಮಧುಗಿರಿಯಲ್ಲಿರುವ ನಮ್ಮ ಮನೆಗೆ ಬಂದಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್ ಯತ್ನ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಡಿಜಿಪಿ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದೇನೆ ಎಂದರು.
ಕೇವಲ ಹನಿಟ್ರ್ಯಾಪ್ ಮಾತ್ರವಲ್ಲ ನನ್ನ ಹತ್ಯೆಗೂ ಕೂಡ ಸಂಚು ನಡೆದಿದೆ. ನನ್ನನ್ನು ಮುಗಿಸಲು ಹಂತಕರಿಗೆ ಸುಪಾರಿ ನೀಡಲಾಗಿದೆ. ಇದಕ್ಕಾಗಿ ಸೋಮ, ಭರತ್ ಎಂಬ ಇಬ್ಬರ ಹೆಸರನ್ನು ಉಲ್ಲೇಖಿಸಿದರು.
ಕಳೆದ ನವೆಂಬರ್ 16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕೋಕೆ ಸ್ವಲ್ಪ ಜನ ಬಂದಿದ್ದರು. ಆ ಸಂದರ್ಭದಲ್ಲಿ ಸೋಮ, ಭರತ್ ಹತ್ಯೆ ಮಾಡಲು ಪ್ರಯತ್ನ ಮಾಡಿದ್ದರು. ನನ್ನ ಆಪ್ತರ ಮೂಲಕ ನನಗೆ ಈ ಮಾಹಿತಿ ಗೊತ್ತಾಯಿತು. ಅದಾದ ನಂತರ ನಾನು ಎಚ್ಚರಗೊಂಡಿದ್ದೇನೆ ಎಂದರು.
ಕಳೆದ ಜನವರಿಯಲ್ಲಿ ನನಗೆ ಆಪ್ತರು ಆಡಿಯೋ ಒಂದನ್ನು ನೀಡಿದ್ದಾರೆ. ಅದರಲ್ಲಿ ಮೂವರು ನನ್ನ ಹತ್ಯೆಗೆ ಸುಪಾರಿ ನೀಡುವ ಬಗ್ಗೆ ಮಾತನಾಡಿದ್ದಾರೆ. 5 ಲಕ್ಷ ರೂಪಾಯಿ ಸುಪಾರಿ ಪಡೆದುಕೊಂಡಿರುವ ವಿಚಾರ ಚರ್ಚಿಸಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಮಹಾ ನಿರ್ದೇಶಕರಿಗೆ ವಿವರಿಸಿದ್ದೇನೆ. ಅವರು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಎಸ್ ಪಿ ಅವರನ್ನು ಭೇಟಿ ಮಾಡಿ ದೂರು ನೀಡುತ್ತಿದ್ದೇನೆ ಎಂದರು.




