ಬೆಂಗಳೂರು: ನಾನು ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಹೊಸ ಕಚೇರಿ ನೋಡಲು ಹೋಗಿದ್ದೆ. ತಮ್ಮ ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದೆಹಲಿ ಭೇಟಿಯ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಪಕ್ಷದ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಆದರೆ ಈ ವೇಳೆ ರಾಜಕೀಯ ವಿಚಾರದ ಬಗ್ಗೆ ಯಾವುದನ್ನು ಮಾತನಾಡಿಲ್ಲ. ಇದರಲ್ಲಿ ಮುಚ್ಚಿಡುವಂಥದ್ದು ಏನು ಇಲ್ಲ. ಜನ ಸಮುದಾಯಕ್ಕೆ ಗೊತ್ತಾಗುವಂತ ವಿಚಾರಗಳೇ ರಾಜಕೀಯ. ಮುಚ್ಚಿಡುವಂಥ ವಿಚಾರಗಳು ಏನು ಇಲ್ಲ. ನಾನು ಒಂದು ವೇಳೆ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿದ್ದರೆ, ಆ ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಇರಬಹುದು ಅಥವಾ ಮುಖ್ಯಮಂತ್ರಿ ವಿಚಾರ ಇರಬಹುದು ಯಾವುದನ್ನು ಎಲ್ಲಿಯೂ ಮಾತನಾಡಿಲ್ಲ. ಶೋಷಿತ ಸಮಾವೇಶದ ಬಗ್ಗೆಯೂ ಮಾತನಾಡಿಲ್ಲ. ಯಾವುದೇ ರಾಜಕೀಯ ವಿಚಾರಗಳನ್ನು ಮಾತನಾಡಿಲ್ಲ. ಆ ರೀತಿ ಅಜೆಂಡಾಗಳಿದ್ದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದೆ ಎಂದರು.




