ಕರ್ನಾಟಕದಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ನಡೆಯಲಿದೆ: ಕೆ.ಎಸ್.ಈಶ್ವರಪ್ಪ

2 years ago

#rapid #political #revolution #Maharashtra #model #Karnataka #KSEshwarappa

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‍ನಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ತೀವ್ರಗೊಂಡಿದೆ. ಸದ್ಯದಲ್ಲೇ ಇಲ್ಲೂ ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ನಡೆಯಲಿದೆ ಎಂದು ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಂತೆ ಇಲ್ಲೂ ಕೂಡ ಅನೇಕ ಮಂದಿ ಹುಟ್ಟಿ ಕೊಂಡಿದ್ದಾರೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯುವ ಸಾಧ್ಯತೆಗಳು ಇಲ್ಲ ಎಂದು ಹೇಳಿದರು.

ಜನರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ಅಧಿಕಾರಕ್ಕಾಗಿ ಅವರವರಲ್ಲೇ ಬಣಗಳು ಸೃಷ್ಟಿಯಾಗಿವೆ. ಸ್ವತಃ ರಾಜ್ಯದ ಜನತೆಯೇ ಯಾಕಾದಾರು ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟೆವೊ ಎಂದು ಹಿಡಿಶಾಪ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಶಾಸಕರಿಗೆ ಕ್ಷೇತ್ರಕ್ಕೆ ಹಣ ಕೊಟ್ಟಿಲ್ಲ. ಒಂದು ರೂಪಾಯಿ ಹಣ ಬಿಡುಗಡೆ ಆಗಿಲ್ಲ. ಇದೊಂದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ. ಮುಖ್ಯಮಂತ್ರಿಗಳೇ ಅತೃಪ್ತ ಶಾಸಕರ ದೊಡ್ಡ ಪಟ್ಟಿಯೇ ಇದೆ. ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದೀರಿ, ನಿಮಗೆ ಈ ದೌರ್ಭಾಗ್ಯ ಬರಬಾರದಿತ್ತು. ಇದಕ್ಕಿಂತ ನೀವು ರಾಜೀನಾಮೆ ಕೊಡುವುದೇ ಸೂಕ್ತ. ಸಿಎಂ, ಡಿಸಿಎಂ ಇಬ್ಬರೂ ರಾಜೀನಾಮೆ ಕೊಡಿ. ಕೂಡಲೇ ಕ್ಯಾಬಿನೆಟ್ ವಿಸರ್ಜಿಸಿ ಚುನಾವಣೆಗೆ ಹೋಗುವುದು ಸೂಕ್ತ ಎಂದರು.

ಪ್ರತಿಯೊಬ್ಬರಿಗೂ ಅಧಿಕಾರ ಬೇಕು, ಇಲ್ಲಿ ಹೆಚ್ಚು ಮಂದಿ ಅಜಿತ್ ಪವಾರ್‍ ಗಳು ಇರುವುದರಿಂದ ನಾನು ಸರ್ಕಾರದ ಗ್ಯಾರಂಟಿ ಬಗ್ಗೆ ಹೇಳುವುದಿಲ್ಲ ಎಂದರು.

Leave a Reply